Yuvavahini

OCT 06, 2026 9.00 PM IST

ಯುವವಾಹಿನಿ ಮಂಗಳೂರು ಘಟಕ

ಹಗ್ಗಜಗ್ಗಾಟ ತಂಡಕ್ಕೆ ಗೌರವಾರ್ಪಣೆ

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ಪುರುಷರ ಹಗ್ಗಜಗ್ಗಾಟ ತಂಡವು ಮೂಡುಬಿದಿರೆಯಲ್ಲಿ ನಡೆದ ಅಂತರ್ ಘಟಕ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ತಂಡದ ಆಟಗಾರರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ, ಮೋಹನ್ ಆಳ್ವ ಅವರ ಸಹಕಾರದೊಂದಿಗೆ ಆಳ್ವಾಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರ್ ಘಟಕ ಕ್ರೀಡಾಕೂಟದಲ್ಲಿ ಮಂಗಳೂರು ಘಟಕದ ಪುರುಷರ ಹಗ್ಗಜಗ್ಗಾಟ ತಂಡವು ಪ್ರಥಮ ಸ್ಥಾನ ಪಡೆದು ಘಟಕಕ್ಕೆ ಹೆಮ್ಮೆ ತಂದಿದೆ.

ಅಕ್ಟೋಬರ್ 6ರಂದು ಯುವವಾಹಿನಿ ಮಂಗಳೂರು ಘಟಕದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವು ಸಂಜೆ 5.30ರಿಂದ ಭಜನೆಯೊಂದಿಗೆ ಆರಂಭವಾಯಿತು. ಬಳಿಕ ಗೋಪಾಲ ಪೂಜಾರಿ ಅವರ ಗುರುಪೂಜೆ ನೆರವೇರಿಸಲಾಯಿತು. ಹಗ್ಗಜಗ್ಗಾಟ ತಂಡದ ವತಿಯಿಂದ ಗುರುಪೂಜೆಯ ಸೇವೆ ಸಲ್ಲಿಸಲಾಯಿತು.

ಸಂಜೆ 7 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷರು ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡದ ಸದಸ್ಯರು ಬಹುಮಾನದ ಟ್ರೋಫಿಯನ್ನು ಘಟಕದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ ಆಟಗಾರರು ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು. ಮಂಗಳೂರು ಘಟಕವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು.

ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಘಟಕಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಸದಸ್ಯರು ಇದೇ ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಘಟಕದ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಅಧ್ಯಕ್ಷ ಹರೀಶ್ ಕೆ. ಸುವರ್ಣ ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಗ್ಗಜಗ್ಗಾಟ ತಂಡದ ಆಟಗಾರರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಕ್ರೀಡಾ ನಿರ್ದೇಶಕ ಸುಜಿತ್ ಕೋಟ್ಯಾನ್, ಕ್ರೀಡಾಕೂಟದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದ ಜೊತೆ ಕಾರ್ಯದರ್ಶಿ ತಿಲಕ್ ರಾಜ್ ಹಾಗೂ ಕಾರ್ಯದರ್ಶಿ ಉಷಾ ಅವರನ್ನು ಮಾಜಿ ಅಧ್ಯಕ್ಷರು ಗೌರವಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಒಂದನೇ ಉಪಾಧ್ಯಕ್ಷ ಯತೀಶ್ ಬಳಂಜ ವಂದಿಸಿದರು. ಕಾರ್ಯಕ್ರಮದ ಬಳಿಕ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!