Yuvavahini

OCT 11, 2026 2.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ

ವ್ಯಕ್ತಿತ್ವ ವಿಕಸನ ಶಿಬಿರಗಳು ಯಶಸ್ವಿ ನಾಯಕರನ್ನು ರೂಪಿಸುತ್ತವೆ – ಭುವನೇಶ್ ಪಚ್ಚಿನಡ್ಕ

ಬಂಟ್ವಾಳ ಅ 11 : ವ್ಯಕ್ತಿತ್ವ ವಿಕಸನ ಶಿಬಿರಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಶಿಸ್ತು ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶಿಬಿರಗಳ ಮೂಲಕ ಯುವಜನರು ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ನಾಯಕರಾಗಿ ರೂಪುಗೊಳ್ಳಲು ಸಾಧ್ಯ ಎಂದು ಯುವವಾಹಿನಿ ರಜತ ವರ್ಷದ ಅಧ್ಯಕ್ಷರು ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಹೇಳಿದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಅಕ್ಟೋಬರ್ 11ರಂದು ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾದ VISION–2026 ‘ಯುವಕರ ದೃಷ್ಟಿಕೋನ’ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಯುವಜನರು ತಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಗುರುತಿಸಿಕೊಂಡು ಸಕಾರಾತ್ಮಕ ಚಿಂತನೆ ಮತ್ತು ಉತ್ತಮ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ನಾಯಕತ್ವವೆಂದರೆ ಕೇವಲ ಜವಾಬ್ದಾರಿಯನ್ನು ನಿರ್ವಹಿಸುವುದಲ್ಲ; ತಂಡವನ್ನು ಒಗ್ಗೂಡಿಸಿ, ಎಲ್ಲರ ಅಭಿಪ್ರಾಯಗಳಿಗೆ ಗೌರವ ನೀಡಿ, ಸಾಮೂಹಿಕ ಗುರಿ ಸಾಧಿಸುವ ಸಾಮರ್ಥ್ಯವೂ ಆಗಿದೆ. ವ್ಯಕ್ತಿತ್ವ ವಿಕಸನ ಶಿಬಿರಗಳು ಯುವಕರಲ್ಲಿ ಸವಾಲುಗಳನ್ನು ಎದುರಿಸುವ ಮನೋಬಲ, ಸಮಯಪಾಲನೆ, ಸಂಘಟನಾ ಕೌಶಲ್ಯ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುತ್ತವೆ ಎಂದು ತಿಳಿಸಿದರು. ಉದ್ಯಮಿ ಲೋಕೇಶ್ ಸುವರ್ಣ ಜಕ್ರಿಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ಯುವಕರ ಕನಸುಗಳಿಗೆ ಸ್ಪಷ್ಟ ದಿಕ್ಕು ನೀಡುವ ವೇದಿಕೆ VISION–2026 – ಸ್ಮಿತೇಶ್ ಎಸ್. ಬಾರ್ಯ

ವ್ಯಕ್ತಿತ್ವ ವಿಕಸನ ತರಬೇತುದಾರ ಸ್ಮಿತೇಶ್ ಎಸ್. ಬಾರ್ಯ ಮಾತನಾಡಿ, “ಯುವವಾಹಿನಿ ಎಂದರೆ ಕೇವಲ ಒಂದು ಸಂಘಟನೆಯಲ್ಲ. ಅದು ಯುವಕರ ಕನಸುಗಳಿಗೆ ರೆಕ್ಕೆ ನೀಡುವ, ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ವೇದಿಕೆ. ಯುವಕರು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿಕೊಂಡು ಆತ್ಮವಿಶ್ವಾಸದಿಂದ ಗುರಿಯತ್ತ ಮುನ್ನಡೆಯಬೇಕು” ಎಂದರು.

ಯುವಕರ ಆಲೋಚನೆಗಳಿಗೆ ಹೊಸ ಶಕ್ತಿ ತುಂಬಿ, ಕನಸುಗಳಿಗೆ ಸ್ಪಷ್ಟ ದಿಕ್ಕು ನೀಡುವಲ್ಲಿ ಇಂತಹ ತರಬೇತಿ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಯುವಜನರು ತಮ್ಮ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು ಅದನ್ನು ಸಾಧಿಸಲು ಶಿಸ್ತು, ಬದ್ಧತೆ ಹಾಗೂ ನಿರಂತರ ಪ್ರಯತ್ನವನ್ನು ಬೆಳೆಸಿಕೊಳ್ಳಬೇಕು. ಅವಕಾಶಗಳಿಗಾಗಿ ಕಾಯುವುದಕ್ಕಿಂತ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲುಗಳನ್ನು ಅಂತ್ಯವೆಂದು ಭಾವಿಸದೆ, ಅವುಗಳನ್ನು ಅನುಭವದ ಪಾಠಗಳಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರಕೋಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ಗೀತಾ ಜಗದೀಶ್ ವಂದಿಸಿದರು. ಕಿರಣ್‌ರಾಜ್ ಪೂಂಜರಕೋಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!