Yuvavahini

OCT 11, 2026 9.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 82

ವಿದ್ಯೆಯೇ ಪ್ರಗತಿಯ ಮೂಲಮಂತ್ರವೆಂದು ಸಾರಿದ ನಾರಾಯಣಗುರುಗಳು : ಸಂತೋಷ್ ಎಸ್. ಸನಿಲ್

ನೇರಳಕಟ್ಟೆ: ಸಮಾಜದ ಪ್ರಗತಿಗೆ ಶಿಕ್ಷಣವೇ ಪ್ರಮುಖ ಸಾಧನವೆಂದು ಅರಿತಿದ್ದ ಬ್ರಹ್ಮಶ್ರೀ ನಾರಾಯಣಗುರುಗಳು, ವಿದ್ಯೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಾಮಾಜಿಕ ಪರಿವರ್ತನೆಗೆ ಅಡಿಪಾಯ ಹಾಕಿದರು ಎಂದು ಶಿಕ್ಷಕ ಸಂತೋಷ್ ಎಸ್. ಸನಿಲ್ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ‘ಗುರುತತ್ವವಾಹಿನಿ’ ಮಾಲಿಕೆ 82ರಲ್ಲಿ ಅವರು ಗುರುಸಂದೇಶ ನೀಡಿದರು.

ಸಮಾಜದಲ್ಲಿ ನೆಲೆಸಿದ್ದ ಅಜ್ಞಾನ, ಅಸಮಾನತೆ ಹಾಗೂ ಮೂಢನಂಬಿಕೆಗಳನ್ನು ದೂರಗೊಳಿಸಿ, ಜನರು ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತ್ಯಗತ್ಯ ಎಂಬುದನ್ನು ನಾರಾಯಣಗುರುಗಳು ತಮ್ಮ ಕಾರ್ಯಗಳ ಮೂಲಕ ತೋರಿಸಿಕೊಟ್ಟರು. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ಅದು ವ್ಯಕ್ತಿಯ ಜ್ಞಾನ, ಚಿಂತನೆ, ವ್ಯಕ್ತಿತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಶಕ್ತಿಯಾಗಿದೆ. ವಿದ್ಯಾವಂತರಾದಾಗ ಮಾತ್ರ ಸಮಾಜದಲ್ಲಿ ಸಮಾನತೆ, ಸಹೋದರತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಸಾಧ್ಯ ಎಂಬ ಸಂದೇಶವನ್ನು ನಾರಾಯಣಗುರುಗಳು ಸಾರಿದರು ಎಂದು ಅವರು ವಿವರಿಸಿದರು.

ನಾರಾಯಣಗುರುಗಳ ತತ್ವಾದರ್ಶಗಳನ್ನು ಇಂದಿನ ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯೆ, ಉದ್ಯೋಗ ಮತ್ತು ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ನಾರಾಯಣಗುರುಗಳ ಸಮಾನತೆಯ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅಕ್ಟೋಬರ್ 11, 2026ರಂದು ನೇರಳಕಟ್ಟೆ ಬಾಡಾರಿನ ಮೂಲದ ಕೊರಗಲ್ಲು ಕೊರಗಜ್ಜ ಗುಳಿಗ ಕ್ಷೇತ್ರದಲ್ಲಿ, ಕ್ಷೇತ್ರದ ಹರಿಣಾಕ್ಷಿ ರಮೇಶ್ ಕುಡ್ಮೇರು ಅವರ ಆತಿಥ್ಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ಹರೀಶ್ ಸಾಲ್ಯಾನ್ ಅಜಕಲ, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ ಉಪಸ್ಥಿತರಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ ಕಾರ್ಯಕ್ರಮ ನಿರೂಪಿಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಸಮರ್ಪಿಸಿದರು. ಸಾಂಸ್ಕೃತಿಕ ನಿರ್ದೇಶಕ ನವೀನ್ ಕುಡ್ಮೇರು ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!