Yuvavahini

OCT 11, 2026 2.00 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಕೊಲ್ಯದಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ

ಕೊಲ್ಯ ಅ 11: ಯುವವಾಹಿನಿ (ರಿ.) ಕೊಲ್ಯ ಘಟಕ, ರೋಟರಿ ಸಮುದಾಯ ದಳ ಸೋಮೇಶ್ವರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕೊಲ್ಯ ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ಉಚಿತ ಹುಚ್ಚುನಾಯಿ ನಿಯಂತ್ರಣಾ ಲಸಿಕಾ ಶಿಬಿರ ನಡೆಯಿತು.

ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸುವುದು ಅತ್ಯಗತ್ಯ: ಡಾ. ರಚನಾ : ಪಶುವೈದ್ಯಕೀಯ ಇಲಾಖೆ, ಉಳ್ಳಾಲ ಇದರ ವೈದ್ಯಾಧಿಕಾರಿ ಡಾ. ರಚನಾ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಾಕುಪ್ರಾಣಿಗಳಿಗೆ ರೇಬಿಸ್ ರೋಗ ಬಾರದಂತೆ ತಡೆಯಲು ಮುನ್ನೆಚ್ಚರಿಕೆಯಾಗಿ ಲಸಿಕೆ ಹಾಕಿಸುವುದು ಅತ್ಯಗತ್ಯ. ರೋಟರಿ ಸಮುದಾಯ ದಳ ಹಾಗೂ ಯುವವಾಹಿನಿ ಘಟಕದ ಸಹಯೋಗದಲ್ಲಿ ಆಯೋಜಿಸಿರುವ ಈ ಉಚಿತ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಪ್ರಾಣಿ-ಪಕ್ಷಿಗಳ ರಕ್ಷಣೆಗೂ ಆದ್ಯತೆ ನೀಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ. ಇಂತಹ ಉಚಿತ ಲಸಿಕಾ ಶಿಬಿರಗಳು ಸಾಕುಪ್ರಾಣಿಗಳ ಆರೋಗ್ಯ ರಕ್ಷಣೆಗೆ ಹಾಗೂ ರೇಬಿಸ್ ರೋಗದ ನಿಯಂತ್ರಣಕ್ಕೆ ಸಹಕಾರಿಯಾಗಿವೆ ಎಂದರು.

ಶಿಬಿರದಲ್ಲಿ ಕೊಲ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾಕುಪ್ರಾಣಿಗಳಿಗೆ ರೇಬಿಸ್ ನಿಯಂತ್ರಣ ಲಸಿಕೆ ಹಾಕಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಕೇಂದ್ರ ಸಮಿತಿಯ ಯುವಸಿಂಚನ ಸಂಪಾದಕ ಮಂಡಳಿ ಸದಸ್ಯ ಲತೀಶ್ ಸಂಕೋಳಿಗೆ, ಘಟಕದ ಪ್ರಥಮ ಉಪಾಧ್ಯಕ್ಷ ಜೀವನ್ ಬೇರಿಕೆ, ದ್ವಿತೀಯ ಉಪಾಧ್ಯಕ್ಷ ಲತೀಶ್ ಪಾಪುದಡಿ, ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!