Yuvavahini

OCT 11, 2026 7.00 PM IST

ಯುವವಾಹಿನಿ ಬಜಪೆ ಘಟಕ

ಯುವವಾಹಿನಿ ಕ್ರೀಡೋತ್ಸವ 2026 : ವಿಜೇತರಿಗೆ ಗೌರವಾರ್ಪಣೆ

ಬಜಪೆ ಅ 11 : ಯುವವಾಹಿನಿ (ರಿ.) ಬಜಪೆ ಘಟಕದ ಪುರುಷ ಹಾಗೂ ಮಹಿಳಾ ಸದಸ್ಯರು ಮೂಡಬಿದ್ರೆಯಲ್ಲಿ ನಡೆದ ಅಂತರ್ಘಟಕ ಕ್ರಿಡೋತ್ಸವದಲ್ಲಿ ನಡೆದ ಅಥ್ಲೆಟಿಕ್ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದ ಆಟಗಾರರಿಗೆ ಗೌರವರ್ಪಣೆ ಸಲ್ಲಿಸಲಾಯಿತು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಮೂಡಬಿದ್ರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಂತರ್ಘಟಕ ಕ್ರೀಡಾಕೂಟದಲ್ಲಿ ನಡೆದ ಅಥ್ಲೆಟಿಕ್ ಪಂದ್ಯಾಟದಲ್ಲಿ ಹಲವು ಬಹುಮಾನಗಳನ್ನು ಪಡೆದು ಘಟಕಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದೆ.
ಅಕ್ಟೋಬರ್ 11 ರಂದು ಸಂಜೆ 05.00 ಗಂಟೆಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಬಜಪೆ ಇಲ್ಲಿ ಗುರು ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಪ್ರಾರಂಭಿಸಿ ಈ ಕಾರ್ಯಕ್ರಮದಲ್ಲಿ
100 ಮೀಟರ್ ಓಟದಲ್ಲಿ ಚಂದ್ರಶೇಖರ ಪೂಜಾರಿ ಹಾಗೂ ಲಿಶ್ಮಿತಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ದ್ವಿತೀಯ ಸ್ಥಾನ ಪಡೆದು ಬಿಂದಿಯ ಬೆಳ್ಳಿಯ ಪದಕ,
200 ಮೀಟರ್ ಓಟದಲ್ಲಿ ಲಿಶ್ಮಿತಾ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ,ನಿತಿನ್ ಹಾಗೂ ಬಿಂದಿಯ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ
ವೇಗದ ನಡಿಗೆಯಲ್ಲಿ ಆನಂದ ಪೂಜಾರಿ ದ್ವಿತೀಯ ಬಹುಮಾನ ಪಡೆದು ಬೆಳ್ಳಿಯ ಪದಕ ರಿಲೇ ಪಂದ್ಯಾಟದಲ್ಲಿ ಲಿಶ್ಮಿತ, ಬಿಂದಿಯ,ಜೀವಿತ ಹಾಗೂ ಯಕ್ಷಿತ ಇವರು ದ್ವಿತೀಯ ಬಹುಮಾನ ಪಡೆದು ಬೆಳ್ಳಿಯ ಪದಕಗಳನ್ನು ತನ್ನ ಮೂಡಿಗೆರಿಸಿಕೊಂಡ ಎಲ್ಲಾ ಸ್ಪರ್ಧಾಳುಗಳನ್ನು ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಿಜೇತರು ತಮ್ಮ ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಹಿತ್ ಪೂಜಾರಿ ವಹಿಸಿಕೊಂಡಿದ್ದರು.ಕ್ರೀಡಾ ಸಂಚಾಲಕರಾದ ದಯಾನಂದ ಅಮೀನ್ ಸಹ ಸಂಚಾಲಕರಾದ ನಿತೇಶ್ ಪೂಜಾರಿ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಸಂತೋಷದ ಕ್ಷಣಗಳನ್ನು ಹಂಚಿಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!