ಬಂಟ್ವಾಳ, ಅ. 12: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ದಸರಾ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 12ರಂದು ಬಿ.ಸಿ. ರೋಡ್ನ ಅನ್ನಪೂರ್ಣ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.

ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಸೇವಾ ಮನೋಭಾವ ಮೆರೆದರು.







