ಸುಳ್ಯ, ಅ. 11: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಎಂಟನೇ ಗುರುಸ್ಫೂರ್ತಿ ಕಾರ್ಯಕ್ರಮವು ಅಕ್ಟೋಬರ್ 11ರ ಭಾನುವಾರ ಪೂರ್ವಾಹ್ನ 9.30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಲೋಹಿತ್ ರೆಂಜಾಳ ಅವರ ಮನೆಯಲ್ಲಿ ನಡೆಯಿತು. ಶ್ರೀ ನಾರಾಯಣ ಗುರುಗಳ ಜೀವನ ಸಂದೇಶ ಹಾಗೂ ತತ್ವಾದರ್ಶಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಯುವವಾಹಿನಿ ಸದಸ್ಯರು ಭಜನಾ ಸಂಕೀರ್ತನೆ ನಡೆಸಿಕೊಟ್ಟರು.

ಯುವವಾಹಿನಿ (ರಿ.) ಮಾಣಿ ಘಟಕದ ರಾಜೇಶ್ ಬಲ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ನಾರಾಯಣ ಗುರುಗಳ ತತ್ವಾದರ್ಶಗಳು, ಸಮಾನತೆಯ ಸಂದೇಶ ಹಾಗೂ ಸಮಾಜ ಸುಧಾರಣೆಗೆ ಅವರು ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಪಟು ಸನ್ನಿಧಿ ನಾನಿಲ್ತಡ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಗಣ ಹಾಗೂ ಮನೆಯ ಯಜಮಾನ ನೀಲಪ್ಪ ಪೂಜಾರಿ ರೆಂಜಾಳ ಉಪಸ್ಥಿತರಿದ್ದರು. ಚಂದ್ರಶೇಖರ ಹೈದಂಗೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.







