Yuvavahini

JUL 18, 2016 8.18 AM IST

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ವಿವಿಧ ಕಾರ್ಯಕ್ರಮಗಳು

ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ.

ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್‌ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ ರೋಶನಿ ನಿಲಯದ ಶ್ರೀಮತಿ ವಿನುತ ರೈ ಮೊದಲಾದವರು ಉಪಸ್ಥಿತರಿದ್ದರು.

ಶಾಲೆಯಲ್ಲಿ ಒಟ್ಟು 175 ವಿದ್ಯಾರ್ಥಿಗಳಿದ್ದು ಅವರೆಲ್ಲರಿಗೂ ಸಸಿಗಳನ್ನು ನೀಡಲಾಯಿತು. ಹಾಗೂ 30 ಬಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಯಿತು. ಶ್ರೀಮತಿ ವಿದ್ಯಾರಾಕೇಶ್ ಸ್ವಾಗತಿಸಿದರು, ಪ್ರಮಿಳಾ ಧನ್ಯವಾದ ನೀಡಿದರು. ಸಂಚಾಲಕಿ ರಶ್ಮಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.

ದೇರಳಕಟ್ಟೆ ಸೇವಾಶ್ರಮಕ್ಕೆ ಭೇಟಿ
ತಾ. 18-7-2016 ರಂದು ಮಂಗಳೂರು ಮಹಿಳಾ ಘಟಕದ ಹೆಚ್ಚಿನ ಸದಸ್ಯರೆಲ್ಲರೂ ಸೇರಿ ಘಟಕದ ಸದಸ್ಯೆ ಕುಶಾಲ ಯಶವಂತ್­ರವರ ಅತ್ತೆಯ 29 ನೇ ವರ್ಷಾಚರಣೆಯನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಶ್ರಮಕ್ಕೆ ದಿನಬಳಕೆಯ ವಸ್ತುಗಳನ್ನು ನೀಡುವುದರೊಂದಿಗೆ ಆಶ್ರಮದಲ್ಲಿ ನೆಲೆಸಿರುವ ವೃದ್ದರಿಗೆ ಊಟೋಪಚಾರದ ವ್ಯವಸ್ಥೆಯನ್ನೂ ಕುಶಾಲ ಯಶವಂತರವರ ಸಹಕಾರದೊಂದಿಗೆ ನೆರವೇರಿಸಲಾಯಿತು.

ಫ್ಯಾನ್ಸಿ ಆಭರಣದ ತಯಾರಿ ತರಬೇತಿ
ತಾ. 2-7-2016 ರಂದು ಕೇಂದ್ರ ಸಮಿತಿಯ ಕಚೇರಿಯಲ್ಲಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಫ್ಯಾನ್ಸಿ ಆಭರಣ ಹಾಗೂ ಪೇಪರ್ ಜ್ಯುವೆಲ್ಲರಿ ತಯಾರಿಯ ತರಬೇತಿ ಕಾರ್ಯಾಗಾರ ಜರಗಿತು. ಈ ಕಾರ್ಯಕ್ರಮದಲ್ಲಿ ಶ್ರೀಮತಿ ವೃಂದಾ ರಾವ್ ಮತ್ತು ಅಧ್ಯಕ್ಷೆ ವಿದ್ಯಾ ರಾಕೇಶ್ ತರಬೇತಿಯನ್ನು ನೀಡಿದರು. ಸುಮಾರು 38 ಮಹಿಳೆಯರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

One thought on “ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ವಿವಿಧ ಕಾರ್ಯಕ್ರಮಗಳು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!