Yuvavahini

OCT 17, 2026 9.00 AM IST

ಯುವವಾಹಿನಿ ಮಾಣಿ ಘಟಕ

‘ಪುದ್ದಾರ್ದ ಪೊರ್ಲು’ ಮೂಲಕ ತುಳುನಾಡಿನ ಸಂಸ್ಕೃತಿಗೆ ಮೆರುಗು

ಮಾಣಿ, ಅ. 17: ತುಳುನಾಡಿನ ಮಣ್ಣಿನ ಸೊಗಡು, ಕೃಷಿ ಸಂಸ್ಕೃತಿ ಹಾಗೂ ಹಿರಿಯರು ಪಾಲಿಸಿಕೊಂಡು ಬಂದ ಸಂಪ್ರದಾಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಅಕ್ಟೋಬರ್ 17ರಂದು ಬಿಲ್ಲವ ಕಿರೋಡಿಯನ್ಸ್ ಕುಟುಂಬದ ಚಾವಡಿಯಲ್ಲಿ ‘ಪುದ್ದಾರ್ದ ಪೊರ್ಲು’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಮಾತುಗಾರರಾಗಿ ಭಾಗವಹಿಸಿದ ಲೋಕನಾಥ್ ತಿಮರಾಜೆ ಅವರು ಮಾತನಾಡಿ, ಹಿಂದಿನ ಕಾಲದಲ್ಲಿ ಭತ್ತ ಮತ್ತು ಅನ್ನಕ್ಕೆ ನೀಡಲಾಗುತ್ತಿದ್ದ ಮಹತ್ವವನ್ನು ವಿವರಿಸಿದರು. ಭತ್ತವನ್ನು ದೈವಸ್ವರೂಪವಾಗಿ ಕಂಡು, ಅನ್ನವನ್ನು ದೇವರ ಪ್ರಸಾದವೆಂದು ಗೌರವಿಸುವ ಸಂಪ್ರದಾಯ ನಮ್ಮ ಹಿರಿಯರಲ್ಲಿತ್ತು. ಹೊಸ ಭತ್ತದ ಆಗಮನದ ಸಂದರ್ಭದಲ್ಲಿ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಲಾಗುತ್ತಿತ್ತು. ಅನ್ನವೆಂದರೆ ಕೇವಲ ಆಹಾರವಲ್ಲ, ಅದು ಬದುಕಿನ ಆಧಾರ ಹಾಗೂ ದೈವಿಕ ಸ್ವರೂಪ ಎಂಬ ಮೌಲ್ಯಯುತ ಸಂದೇಶವನ್ನು ಅವರು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ಅವರು ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಿರೋಡಿಯನ್ಸ್ ಕುಟುಂಬದ ಮುಖ್ಯಸ್ಥರಾದ ಧರ್ಮಣ ಪೂಜಾರಿ, ಸುರೇಶ್ ಶಾಂತಿ, ದರ್ಣಪ್ಪ ಪೂಜಾರಿ, ರಾಜೇಶ್, ಸತೀಶ್, ಲೋಕೇಶ್, ಶ್ರೀಧರ್ ಪೂಜಾರಿ ಮುಜಲ, ಮೋಹನ್ ಪೂಜಾರಿ, ಬಾಲಕೃಷ್ಣ ಕೆರಕೋಡಿ, ಶುಭ, ಲಕ್ಷ್ಮಿ, ಪ್ರೇಮ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಯುವವಾಹಿನಿ ಸದಸ್ಯರು ಉಪಸ್ಥಿತರಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಪೂಜಾರಿ ಬಾಕಿಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತುಳುನಾಡಿನ ಕೃಷಿ ಪರಂಪರೆ, ಅನ್ನದ ಪಾವಿತ್ರ್ಯ ಹಾಗೂ ಸಾಂಪ್ರದಾಯಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ‘ಪುದ್ದಾರ್ದ ಪೊರ್ಲು’ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು. ಘಟಕದ ಕೋಶಾಧಿಕಾರಿ ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!