ಮಂಗಳೂರು, ಅ. 19: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನಡೆಸಲಾಯಿತು.

ಕಾರ್ಯಕ್ರಮದ ಸಂಚಾಲಕಿ ಶಶಿಪ್ರಭಾ ಮಿತ್ತೂರು ಅವರ ಸಂಪೂರ್ಣ ಸಹಕಾರದೊಂದಿಗೆ ಘಟಕದ ಸದಸ್ಯರು ಸ್ವಯಂಸೇವೆ ಹಾಗೂ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹15,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೇವಾ ಮನೋಭಾವವನ್ನು ಬೆಳೆಸಿಕೊಂಡಿರುವ ಯುವವಾಹಿನಿ ಮಾಣಿ ಘಟಕದ ಸದಸ್ಯರ ಕಾರ್ಯವು ಮೆಚ್ಚುಗೆಗೆ ಪಾತ್ರವಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಹರೀಶ್ ಪೂಜಾರಿ ಬಾಕಿಲ, ಘಟಕದ ಮಾಜಿ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಮತ್ತು ಪ್ರಶಾಂತ್ ಅನಂತಾಡಿ, ಘಟಕದ ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.







