ಮಂಗಳೂರು, ಅ. 19: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಸಂಚಾಲಕರಾದ ವಿಜೀತ್ ಮುಂಡಾಜೆ ಮತ್ತು ವಿತೇಶ್ ಕೋಟ್ಯಾನ್ ಅವರ ಸಂಪೂರ್ಣ ಸಹಕಾರದೊಂದಿಗೆ ಘಟಕದ ಸದಸ್ಯರು ಸ್ವಯಂಸೇವೆ ಹಾಗೂ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹7,500 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವವಾಹಿನಿ ಬೆಳ್ತಂಗಡಿ ಘಟಕವು ಸೇವಾ ಮನೋಭಾವ ಮತ್ತು ಸಂಘಟನಾ ಶಕ್ತಿಯನ್ನು ಮೆರೆದಿದೆ.
ಈ ಸೇವಾ ಕಾರ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ರಾಕೇಶ್ ಮೂಡುಕೋಡಿ, ಘಟಕದ ನಿಕಟಪೂರ್ವ ಅಧ್ಯಕ್ಷ ಗುರುರಾಜ್ ಗುರಿಪಲ್ಲ, ಕಾರ್ಯದರ್ಶಿ ಅಶ್ವಿನ್ ಬಳೆಂಜ, ಕೋಶಾಧಿಕಾರಿ ಸುದೀಪ್ ಸಾಲ್ಯಾನ್ ಸೇರಿದಂತೆ ಘಟಕದ ಒಟ್ಟು 75 ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.







