ಮಂಗಳೂರು, ಅ. 20: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಸಂಚಾಲಕರ ಸಂಪೂರ್ಣ ಸಹಕಾರದೊಂದಿಗೆ ಸದಸ್ಯರು ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹75,001 (ಎಪ್ಪತ್ತೈದು ಸಾವಿರದ ಒಂದು ರೂಪಾಯಿ) ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ ಬಂಟ್ವಾಳ ಘಟಕದ ಈ ಕೊಡುಗೆ ಸೇವಾ ಮನೋಭಾವ ಮತ್ತು ಸಂಘಟನಾ ಬದ್ಧತೆಗೆ ಸಾಕ್ಷಿಯಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಕಿರಣ್ ರಾಜ್ ಪೂಂಜಾರಕೋಡಿ, ಕಾರ್ಯದರ್ಶಿ ಗೀತಾ ಜಗದೀಶ್, ಪ್ರಥಮ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ ಹಾಗೂ ನಾಗೇಶ್ ಪೂಜಾರಿ ನೈಬೇಲು ಸೇರಿದಂತೆ ಘಟಕದ ಒಟ್ಟು 35 ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.







