Yuvavahini

OCT 21, 2026 8.00 PM IST

ಯುವವಾಹಿನಿ ಕಡಬ ಘಟಕದಿಂದ

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ದೇಣಿಗೆ

ಮಂಗಳೂರು, ಅ. 21: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಘಟಕದ ಅಧ್ಯಕ್ಷ ಉಮೇಶ್ ಬಳ್ಪ ಅವರ ನೇತೃತ್ವದಲ್ಲಿ ಘಟಕದ ಸದಸ್ಯರು ಹಾಗೂ ಸಮಾಜದ ಬಂಧುಗಳ ಸಂಪೂರ್ಣ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹7,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವವಾಹಿನಿ ಕಡಬ ಘಟಕವು ಸೇವಾ ಮನೋಭಾವ ಮತ್ತು ಸಂಘಟನಾ ಒಗ್ಗಟ್ಟನ್ನು ಮೆರೆದಿದೆ.

ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷ ಉಮೇಶ್ ಬಳ್ಪ, ಕೇಂದ್ರ ಸಮಿತಿಯ ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಙನ, ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಎನ್. ಎಸ್. ಕಡಬ, ಉಪಾಧ್ಯಕ್ಷೆ ಸರಿತಾ ಉಂಡಿಲ, ನಾರಾಯಣ ಗುರು ತತ್ವ ಅನುಷ್ಠಾನ ನಿರ್ದೇಶಕ ಜಯಪ್ರಕಾಶ್ ದೋಳ ಹಾಗೂ ಕಾರ್ಯದರ್ಶಿ ಸತೀಶ್ ಬಳ್ಪ ಸೇರಿದಂತೆ ಸುಮಾರು 80 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!