ಮಂಗಳೂರು, ಅ. 18: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಹಳೆಯಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು.

ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹10,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವವಾಹಿನಿ ಹಳೆಯಂಗಡಿ ಘಟಕವು ಮಂಗಳೂರು ದಸರಾ ಮಹೋತ್ಸವದ ಸೇವಾ ಕಾರ್ಯಕ್ಕೆ ತನ್ನ ಕೊಡುಗೆ ನೀಡಿತು. ಘಟಕದ ಈ ಸೇವಾ ಕಾರ್ಯವು ಸಮಾಜಮುಖಿ ಚಿಂತನೆ ಹಾಗೂ ಸೇವಾ ಮನೋಭಾವಕ್ಕೆ ಸಾಕ್ಷಿಯಾಯಿತು.







