ಮಂಗಳೂರು, ಅ. 21: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ 110 ಸದಸ್ಯರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹30,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವವಾಹಿನಿ ಉಪ್ಪಿನಂಗಡಿ ಘಟಕವು ಮಂಗಳೂರು ದಸರಾ ಮಹೋತ್ಸವದ ಸೇವಾ ಕಾರ್ಯಕ್ಕೆ ಮಹತ್ವದ ಕೊಡುಗೆ ನೀಡಿತು. ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್, ಕಾರ್ಯದರ್ಶಿ ರಮೇಶ್ ಎಸ್. ಸಾಂತ್ಯ, ಪ್ರಥಮ ಉಪಾಧ್ಯಕ್ಷ ಅಂಕಿತ್ ಎಂ. ಜೆ., ಗೌರವ ಸಲಹೆಗಾರ ವರದರಾಜ್ ಎಂ., ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್, ರಾಜಾರಾಮ್ ಕೆ. ಬಿ., ರವಿ ಬೋಲೋಡಿ, ಡಾ. ಆಶಿತ್ ಎಂ. ವಿ., ಚಂದ್ರಶೇಖರ್ ಸನಿಲ್, ಮನೋಹರ್ ಕುಮಾರ್ ಅಟಲ್, ಕುಶಾಲಪ್ಪ ಪೂಜಾರಿ, ಜನಾರ್ದನ ಪೂಜಾರಿ ನೂಜ, ನಾಣ್ಯಪ್ಪ ಕೋಟ್ಯಾನ್ ಹಾಗೂ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮಸುಂದರ್ ಕೊಡಿಪ್ಪಾನ ಸೇರಿದಂತೆ ಘಟಕದ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.







