ಮಂಗಳೂರು, ಅ. 17: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು.

ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹20,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ ಮಂಗಳೂರು ಮಹಿಳಾ ಘಟಕವು ಮಂಗಳೂರು ದಸರಾ ಮಹೋತ್ಸವದ ಅನ್ನದಾನ ಸೇವೆಗೆ ಆರ್ಥಿಕ ಸಹಕಾರ ನೀಡುವ ಮೂಲಕ ಸೇವಾ ಮನೋಭಾವವನ್ನು ಮೆರೆದಿದೆ. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.







