ಮಂಗಳೂರು, ಅ. 20: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 20ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹15,000/- ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಸೇವೆ ಹಾಗೂ ಸಮಾಜಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಈ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸೇವಾಭಾವನೆ ಶ್ಲಾಘನೀಯವಾಗಿದೆ.







