ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ಮನೆಮನೆ ಭಜನಾ ಕಾರ್ಯಕ್ರಮದ ಅಂಗವಾಗಿ ದಿನಾಂಕ 20-10-2026ರ ಮಂಗಳವಾರ ಸಂಜೆ ಕೋಡಿಕಲ್‌ನ ಶ್ರೀ ಜಗದಂಬ ದೇವಸ್ಥಾನದ ಮೀನಾ ಪೂಜಾರ್ತಿ ಅವರ ಮನೆಯಲ್ಲಿ ಭಜನಾ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

ಭಜನೆಯ ಮೂಲಕ ಭಕ್ತಿ, ಆಧ್ಯಾತ್ಮಿಕತೆ ಹಾಗೂ ಗುರುತತ್ವದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಕ್ತಿಯಿಂದ ಪಾಲ್ಗೊಂಡು ಭಜನಾ ಸೇವೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಭಜನಾ ಸೇವೆ ಸಲ್ಲಿಸಿದ ಎಲ್ಲಾ ಸದಸ್ಯರಿಗೂ ಹಾಗೂ ಆತ್ಮೀಯವಾಗಿ ಆತಿಥ್ಯ ನೀಡಿದ ಕುಟುಂಬದವರಿಗೂ ಘಟಕದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಈ ಮನೆಮನೆ ಭಜನಾ ಸೇವೆಯು ಎಲ್ಲರಲ್ಲಿಯೂ ಭಕ್ತಿ, ಪ್ರೀತಿ, ಸೌಹಾರ್ದತೆ ಹಾಗೂ ಸಂಘಟನೆಯ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸಲಿ ಎಂದು ಘಟಕವು ಆಶಿಸಿದೆ.







