ಸಸಿಹಿತ್ಲು ಅ 18 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ವತಿಯಿಂದ ದಿನಾಂಕ 18-10-2026ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹8,000/- (ಎಂಟು ಸಾವಿರ ರೂಪಾಯಿ) ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ವೀಣಾ ಮನೋಜ್, ಕಾರ್ಯದರ್ಶಿ ಶ್ರೀನಿಧಿ ಹಾಗೂ ಮಾಜಿ ಅಧ್ಯಕ್ಷರಾದ ಹರೀಶ್ ಮತ್ತು ಮೋಹಿನಿ ಉಪಸ್ಥಿತರಿದ್ದರು. ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಸಿಹಿತ್ಲು ಘಟಕದ ಈ ಸೇವಾ ಕಾರ್ಯವು ಯುವವಾಹಿನಿಯ ಸೇವಾ ಮನೋಭಾವಕ್ಕೆ ಸಾಕ್ಷಿಯಾಯಿತು.







