ಸುಳ್ಯ 18 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 18-10-2026ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಸಕ್ರಿಯ ಸಹಕಾರದೊಂದಿಗೆ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗಾಗಿ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಲಾದ ₹10,000/- (ಹತ್ತು ಸಾವಿರ ರೂಪಾಯಿ) ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಧಾರ್ಮಿಕ ಸೇವೆ ಹಾಗೂ ಸಮಾಜಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಈ ಕಾರ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರ ಸೇವಾಭಾವನೆ ಶ್ಲಾಘನೀಯವಾಗಿದೆ.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಮಹೇಶ್ ಕಲ್ಪನೆ, ಕಾರ್ಯದರ್ಶಿ ರಂಜೀತ್, ಕೇಂದ್ರ ಸಮಿತಿಯ ನಾರಾಯಣ ಗುರು ತತ್ವಪ್ರಚಾರ ನಿರ್ದೇಶಕರಾದ ಲೋಹಿತ್ ರೆಂಜಾಳ, ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.







