ಕೆಂಜಾರು ಕರಂಬಾರು ಅ 19 : ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ದಿನಾಂಕ 19-10-2026ರ ಸೋಮವಾರದಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಘಟಕದ ಪದಾಧಿಕಾರಿಗಳು, ಹಿರಿಯರು ಹಾಗೂ ಸರ್ವ ಸದಸ್ಯರು ಬೆಳಗ್ಗಿನಿಂದ ಸಂಜೆಯವರೆಗೆ ಶಿಸ್ತುಬದ್ಧವಾಗಿ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡು, ಕ್ಷೇತ್ರದ ಸೇವಾ ಕಾರ್ಯಗಳಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಘಟಕದ ಸದಸ್ಯರು ಹಾಗೂ ದಾನಿಗಳ ಉದಾರ ಸಹಕಾರದೊಂದಿಗೆ ಸಂಗ್ರಹಿಸಲಾದ ₹8,000/- (ಎಂಟು ಸಾವಿರ ರೂಪಾಯಿ) ಅನ್ನದಾನ ನಿಧಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು.
ಧಾರ್ಮಿಕ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದ ಕೆಂಜಾರು–ಕರಂಬಾರು ಘಟಕದ ಸರ್ವ ಸದಸ್ಯರು ಹಾಗೂ ದಾನಿಗಳ ಸೇವಾ ಮನೋಭಾವ ಅಭಿನಂದನಾರ್ಹವಾಗಿದೆ.







