Yuvavahini

OCT 22, 2026 8.00 PM IST

ಯುವವಾಹಿನಿ (ರಿ.) ಉಡುಪಿ ಘಟಕದಿಂದ ಗುರು ಸತ್ಸಂಗ ಕಾರ್ಯಕ್ರಮ

ಗುರುಸ್ಮರಣೆ, ಭಜನೆ ಹಾಗೂ ಸತ್ಸಂಗದ ಮೂಲಕ ಆಧ್ಯಾತ್ಮಿಕ ಚಿಂತನೆ

ಉಡುಪಿ, ಅ. 22: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ದಿನಾಂಕ 22-10-2026ರ ಗುರುವಾರ ಸಂಜೆ 6:30ಕ್ಕೆ ಘಟಕದ ಪ್ರಚಾರ ನಿರ್ದೇಶಕರಾದ ಶಕುಂತಲಾ ಸುಕೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಯಿತು.

ಮನೆಯವರೆಲ್ಲರೂ ಸೇರಿ ಗುರುಗಳಿಗೆ ದೀಪ ಬೆಳಗಿಸಿ, ಭಜನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದಿನ ಯುವಜನತೆಗೆ ಪ್ರೇರಣೆ ನೀಡುವ ಹಾಗೂ ಮನಮುಟ್ಟುವ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಘಟಕದ ಸಂಘಟನಾ ಕಾರ್ಯದರ್ಶಿ ಮಹೇಶ್ ಮಲ್ಪೆ ಅವರು ಗುರು ಸತ್ಸಂಗ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು.

ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಅವರು ಗುರುಪೂಜೆಯನ್ನು ನೆರವೇರಿಸಿ, ಮನೆಯವರಿಗೂ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಗುರುಗಳ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸಿದರು. ಬಳಿಕ ಗುರುಗಳ ಪ್ರಸಾದವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೊಲ್ಯ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಹಾಗೂ ಅವರ ಪತ್ನಿಗೆ ಗಿಡವನ್ನು ನೀಡಿ ಗೌರವಿಸಲಾಯಿತು. ಗುರು ಸತ್ಸಂಗವನ್ನು ನಡೆಸಿಕೊಟ್ಟ ಮಹೇಶ್ ಮಲ್ಪೆ ಹಾಗೂ ಆತಿಥ್ಯ ವಹಿಸಿದ ಶಕುಂತಲಾ ಸುಕೇಶ್ ದಂಪತಿಗಳಿಗೂ ಗಿಡವನ್ನು ನೀಡಿ ಗೌರವಿಸಲಾಯಿತು. ಭಜನಾ ಸೇವೆ ಸಲ್ಲಿಸಿದ ಮಹಿಳಾ ಸದಸ್ಯರಿಗೂ ಪ್ರಸಾದ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಘಟಕದ ಸಮಾಜಸೇವಾ ನಿರ್ದೇಶಕರಾದ ಸುಜಿತ್ ಮಟ್ಟು, ನಾರಾಯಣ ಗುರು ತತ್ವಪ್ರಚಾರ ನಿರ್ದೇಶಕರಾದ ಶಾರದಾ ಉಮೇಶ್, ಘಟಕದ ಮಾಜಿ ಅಧ್ಯಕ್ಷರು, ಸದಸ್ಯರು, ಸ್ಥಳೀಯರು ಹಾಗೂ ಹಿತೈಷಿ ಬಂಧುಗಳು ಉಪಸ್ಥಿತರಿದ್ದರು. ಅರವಿಂದ್ ಕಲ್ಲುಗುಡ್ಡೆ ಸ್ವಾಗತಿಸಿದರು. ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ವಂದನಾರ್ಪಣೆಗೈದರು. ಬಳಿಕ ಎಲ್ಲರೂ ಒಟ್ಟಾಗಿ ಗುಂಪು ಛಾಯಾಚಿತ್ರದಲ್ಲಿ ಸ್ಮರಣೀಯ ಕ್ಷಣಗಳನ್ನು ದಾಖಲಿಸಿಕೊಂಡರು. ಕೊನೆಯಲ್ಲಿ ಊಟೋಪಚಾರದೊಂದಿಗೆ ಗುರು ಸತ್ಸಂಗ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

ಗುರುಗಳ ಸ್ಮರಣೆ, ಭಜನೆಯ ಮಧುರತೆ ಹಾಗೂ ಸತ್ಸಂಗದ ಸಾನ್ನಿಧ್ಯದಿಂದ ಮನಸ್ಸಿಗೆ ಶಾಂತಿ ಮತ್ತು ಬದುಕಿಗೆ ಸನ್ಮಾರ್ಗ ದೊರೆಯಲಿ. ನಾರಾಯಣ ಗುರುಗಳ ತತ್ವಾದರ್ಶಗಳು ಎಲ್ಲರ ಜೀವನಕ್ಕೂ ಸದಾ ಪ್ರೇರಣೆಯಾಗಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮವು ಮೂಡಿಬಂದಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!