Yuvavahini

OCT 11, 2026 6.00 PM IST

ಯುವವಾಹಿನಿ (ರಿ) ಬಜಪೆ ಘಟಕ

ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಸ್ವಯಂಸೇವೆ

ಬಜಪೆ ಅ 11 : ಪರಮಪೂಜ್ಯ ದೈವೈಕ್ಯ ಶ್ರೀ ಶ್ರೀ ಶ್ರೀ ನಿರಂಜನ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಸುಂಕದಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಿಯ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.

ಅಕ್ಟೋಬರ್ 11ರಿಂದ 20ರವರೆಗೆ ನಡೆಯುವ ನವರಾತ್ರಿ ಮಹೋತ್ಸವದ ಎಂಟನೇ ದಿನವಾದ ಅಕ್ಟೋಬರ್ 18ರಂದು ರಾತ್ರಿ 7.30ರಿಂದ 10 ಗಂಟೆಯವರೆಗೆ ಯುವವಾಹಿನಿ ಬಜಪೆ ಘಟಕದ ಸದಸ್ಯರು ಅನ್ನಪ್ರಸಾದ ವಿತರಣಾ ಸೇವೆಯಲ್ಲಿ ಪಾಲ್ಗೊಂಡರು. ನಿಸ್ವಾರ್ಥ ಸೇವಾ ಮನೋಭಾವದಿಂದ ಭಕ್ತರಿಗೆ ಅನ್ನಪ್ರಸಾದ ಬಡಿಸುವ ಮೂಲಕ ಧಾರ್ಮಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಸಂಘಟನೆಯ ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಸೇವೆ ಮತ್ತು ಸಹಕಾರದ ಮಹತ್ವವನ್ನು ಸಾರಿದರು. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಒಗ್ಗಟ್ಟು ಹಾಗೂ ಸೇವಾ ಮನೋಭಾವದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ಕೈಜೋಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ, ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಶ್ರೀ ದೇವಿಯ ಪ್ರಸಾದ ಮತ್ತು ಅನ್ನಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!