Yuvavahini

OCT 23, 2026 9.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 83

ಸರ್ವೇಶ್ವರನ ಅವತಾರ ಪುರುಷ ನಾರಾಯಣಗುರು : ಶಿವರಾಜ್ ಗಟ್ಟಿ

ವಾಮದಪದವು ಅ 23 : ನಾರಾಯಣಗುರುಗಳು ಸರ್ವೇಶ್ವರನ ಅವತಾರ ಪುರುಷರಾಗಿ ಮಾನವಕುಲದ ಉದ್ಧಾರಕ್ಕಾಗಿ ಜನಿಸಿದ ಮಹಾನ್ ದಾರ್ಶನಿಕರು. ಮನುಷ್ಯನಲ್ಲಿರುವ ದೈವತ್ವವನ್ನು ಗುರುತಿಸಿ, ಜಾತಿ-ಮತಗಳ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸತ್ಯವನ್ನು ಜಗತ್ತಿಗೆ ಸಾರಿದ ಮಹಾನ್ ಸಂತ ನಾರಾಯಣಗುರುಗಳು ಎಂದು ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಿವರಾಜ್ ಗಟ್ಟಿ ಹೇಳಿದರು.

ನಾರಾಯಣಗುರುಗಳ ಆಧ್ಯಾತ್ಮಿಕ ಚಿಂತನೆ ಮತ್ತು ಸಮಾಜ ಸುಧಾರಣೆಯ ಕಾರ್ಯಗಳನ್ನು ವಿವರಿಸಿದ ಅವರು, ದೇವರನ್ನು ದೇವಾಲಯಗಳಲ್ಲಿ ಮಾತ್ರ ಹುಡುಕದೆ, ಪ್ರತಿಯೊಬ್ಬ ಮನುಷ್ಯನಲ್ಲಿಯೂ ದೈವತ್ವವನ್ನು ಕಾಣುವ ವಿಶಾಲ ದೃಷ್ಟಿಕೋನವನ್ನು ಗುರುಗಳು ಬೋಧಿಸಿದರು. ಮನುಷ್ಯನನ್ನು ಮನುಷ್ಯನಾಗಿ ಗೌರವಿಸುವುದೇ ನಿಜವಾದ ಧರ್ಮ ಎಂಬ ಸಂದೇಶವನ್ನು ತಮ್ಮ ಬದುಕಿನ ಮೂಲಕ ಜಗತ್ತಿಗೆ ತೋರಿಸಿಕೊಟ್ಟರು ಎಂದು ತಿಳಿಸಿದರು.

ಅವರು ದಿನಾಂಕ 23-10-2026 ರಂದು ಸದಾನಂದ ಪೂಜಾರಿ ಅಂಗಡಿಪಲ್ಕೆ ವಾಮದಪದವು ಇವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 83 ರಲ್ಲಿ ಗುರುಸಂದೇಶ ನೀಡಿದರು

ಈ‌ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ದ್ವಿತೀಯ ಉಪಾಧ್ಯಕ್ಷ ಹರೀಶ್ ಅಜಕಲ , ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ , ಭಜನಾ ಪ್ರಶಿಕ್ಷರು ಮತ್ತು ಸಂಗೀತ ಗುರುಗಳಾದ ಸತೀಶ್ ಪೂಂಜ ವಾಮದಪದವು, ನಿರ್ದೇಶಕರಾದ ಶೇಖರ್ ಅಗಲ್ದೋಡಿ, ನವೀನ್ ಕುಡ್ಮೇರು, ಸಂಘಟನಾ ಕಾರ್ಯದರ್ಶಿ ಸರಿತಾ ಮೂರ್ಜೆ , ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ , ಮಧುಸೂದನ್ ಮಧ್ವ, ಲಿತೀಶ್ ವಾಮದಪದವು , ಶಶಾಂಕ್ ವಾಮದಪದವು ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಭಾಗವಹಿಸಿದ್ದರು.

ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ ಸಂಗೀತ ಸೇವೆ ನೀಡಿದರು. ಆತಿಥ್ಯ ವಹಿಸಿದ ಸದಾನಂದ ಪೂಜಾರಿ ಇವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಕಿರಣ್ ಪೂಂಜರಕೊಡಿ
ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!