Yuvavahini

OCT 21, 2026 7.00 PM IST

ಯುವವಾಹಿನಿ (ರಿ.) ಮಂಗಳೂರು ಘಟಕದಿಂದ 12ನೇ ವರ್ಷದ ಉಚಿತ ಪಾನೀಯ ಸೇವೆ

ಕುದ್ರೋಳಿ ದಸರಾ ಶೋಭಾಯಾತ್ರೆಯಲ್ಲಿ ಸುಮಾರು ಒಂದು ಲಕ್ಷ ಜನರಿಗೆ ಪಾನೀಯ ವಿತರಣೆ

ಮಂಗಳೂರು ಅ 21 : ಕುದ್ರೋಳಿ ದಸರಾ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರು ಹಾಗೂ ಸಾರ್ವಜನಿಕರ ದಣಿವು ನಿವಾರಿಸಿ, ದಾಹ ತಣಿಸುವ ಸಾರ್ಥಕ ಸೇವಾ ಕಾರ್ಯವನ್ನು ಯುವವಾಹಿನಿ (ರಿ.) ಮಂಗಳೂರು ಘಟಕವು ಸತತ 12ನೇ ವರ್ಷವೂ ಯಶಸ್ವಿಯಾಗಿ ನೆರವೇರಿಸಿತು. ಘಟಕದ ಈ ಸೇವಾ ಕಾರ್ಯಕ್ಕೆ ಎಸ್.ಎಲ್. ಶೇಟ್ ಡೈಮಂಡ್ ಹೌಸ್‌ನ ಮಾಲೀಕ ರವೀಂದ್ರ ಶೇಟ್ ಅವರು ಶುಭ ಹಾರೈಸಿದರು.

ಅಕ್ಟೋಬರ್ 21, 2026ರಂದು ಕುದ್ರೋಳಿ ದಸರಾ ಶೋಭಾಯಾತ್ರೆಯ ಪ್ರಯುಕ್ತ ಎಸ್.ಎಲ್. ಶೇಟ್ ಡೈಮಂಡ್ ಹೌಸ್‌ನ ಸ್ಥಳದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಹಕಾರದೊಂದಿಗೆ ಉಚಿತ ಪಾನೀಯ ಸೇವೆಯನ್ನು ಆಯೋಜಿಸಲಾಗಿತ್ತು. ಶೋಭಾಯಾತ್ರೆಗೆ ಆಗಮಿಸಿದ ಸುಮಾರು ಒಂದು ಲಕ್ಷ ಜನರು ಪಾನೀಯ ಸೇವನೆಯ ಪ್ರಯೋಜನ ಪಡೆದರು.

ಕಾರ್ಯಕ್ರಮವನ್ನು ಎಸ್.ಎಲ್. ಶೇಟ್ ಡೈಮಂಡ್ ಹೌಸ್‌ನ ಮಾಲೀಕ ರವೀಂದ್ರ ಶೇಟ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ, ಮಾಜಿ ಅಧ್ಯಕ್ಷ ಯಶವಂತ ಪೂಜಾರಿ ಹಾಗೂ ಘಟಕದ ಮಾಜಿ ಅಧ್ಯಕ್ಷರುಗಳು ಉದ್ಘಾಟಿಸಿ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಸದಸ್ಯ ಸತೀಶ್ ಕೆ. ನಿರ್ವಹಿಸಿ, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು. ಪಾನೀಯ ಸೇವೆಯ ಸಂಚಾಲಕ ಶ್ರೀಕಾಂತ್ ಅಂಚನ್, ಸಹ ಸಂಚಾಲಕ ಚಂದ್ರಶೇಖರ ಕಿನ್ನಿಗೋಳಿ ಹಾಗೂ ಮಾರ್ಗದರ್ಶಕ ನಾರಾಯಣ ಕರ್ಕೇರ ಅವರ ಪರಿಶ್ರಮ ಮತ್ತು ಸಂಘಟನಾ ಸಾಮರ್ಥ್ಯದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ದಸರಾ ಶೋಭಾಯಾತ್ರೆಯ ಸಂದರ್ಭದಲ್ಲಿ ಉಚಿತ ಪಾನೀಯ ವಿತರಿಸುವ ಮೂಲಕ ಸಾರ್ವಜನಿಕರ ದಾಹ ತಣಿಸಿದ ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸತತ 12 ವರ್ಷಗಳಿಂದ ಸೇವಾ ಪರಂಪರೆಯನ್ನು ಮುಂದುವರಿಸಿಕೊಂಡು ಬರುತ್ತಿರುವ ಯುವವಾಹಿನಿ ಮಂಗಳೂರು ಘಟಕದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!