Yuvavahini

OCT 28, 2026 6.00 PM IST

ಯುವವಾಹಿನಿ ಕೊಲ್ಯ ಘಟಕದ ಆಶ್ರಯದಲ್ಲಿ 30 ದಿನಗಳ ತರಬೇತಿ ಯಶಸ್ವಿ ಸಮಾರೋಪ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಬ್ರೈಡಲ್ ಮೇಕಪ್ ತರಬೇತಿ ಪೂರಕ: ವಿದ್ಯಾ ರಾಕೇಶ್

ಮಂಗಳೂರು ಅ 28 : ಮಹಿಳೆಯರು ಕಲಿತ ಕೌಶಲ್ಯವನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ, ಭವಿಷ್ಯದಲ್ಲಿ ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ಹಾಗೂ ತರಬೇತಿಯ ಸಂಪನ್ಮೂಲ ವ್ಯಕ್ತಿ ವಿದ್ಯಾ ರಾಕೇಶ್ ಹೇಳಿದರು.

ಯುವವಾಹಿನಿ (ರಿ.) ಕೊಲ್ಯ ಘಟಕ, ಸಿಡಾಕ್ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 30 ದಿನಗಳ ಬ್ರೈಡಲ್ ಮೇಕಪ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಲಿತ ವಿದ್ಯೆಯನ್ನು ಮರೆಯದೆ ನಿರಂತರ ಅಭ್ಯಾಸದ ಮೂಲಕ ಹೆಚ್ಚಿನ ಅನುಭವ ಗಳಿಸಬೇಕು. ಸ್ವಂತ ಉದ್ಯಮ ಆರಂಭಿಸುವ ಆತ್ಮವಿಶ್ವಾಸ ಬಂದಾಗ ಧೈರ್ಯದಿಂದ ಹೆಜ್ಜೆಯಿಟ್ಟು ಇತರರಿಗೂ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಬ್ರೈಡಲ್ ಮೇಕಪ್ ಕ್ಷೇತ್ರಕ್ಕೆ ಇಂದು ಹೆಚ್ಚಿನ ಬೇಡಿಕೆಯಿದ್ದು, ಸೂಕ್ತ ತರಬೇತಿ ಮತ್ತು ಕೌಶಲ್ಯ ಬೆಳೆಸಿಕೊಳ್ಳುವ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉತ್ತಮ ಅವಕಾಶವಿದೆ ಎಂದರು.

ಇನ್ನೋರ್ವ ಅತಿಥಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಮಾತನಾಡಿ, ತರಬೇತಿ ಪಡೆದ ಮಹಿಳೆಯರ ಪ್ರಯತ್ನವನ್ನು ಶ್ಲಾಘಿಸಿದರು. ಮುಂದೆಯೂ ದೊರೆಯುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವಂತೆ ಕರೆ ನೀಡಿದರು. ಅಕ್ಟೋಬರ್ 28, 2026ರಂದು ಗೋರಿಗುಡ್ಡೆಯ ಕೆಎಸ್‌ಟಿಎ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್‌ಟಿಎ ರಾಜ್ಯ ಕೋಶಾಧಿಕಾರಿ ಪ್ರಜ್ವಲ್ ಕುಮಾರ್, ವಲಯ ಅಧ್ಯಕ್ಷ ಹರೀಶ್, ಸಿಡಾಕ್ ಸಂಸ್ಥೆಯ ತರಬೇತುದಾರರಾದ ಪ್ರತ್ಯುಷ ಮತ್ತು ದೀಪ ಉಪಸ್ಥಿತರಿದ್ದರು. ತರಬೇತಿ ಪೂರ್ಣಗೊಳಿಸಿದ ಮಹಿಳೆಯರು ತಮ್ಮ ಅನುಭವಗಳನ್ನು ಹಂಚಿಕೊಂಡು, ತರಬೇತಿ ಪಡೆಯಲು ಅವಕಾಶ ಕಲ್ಪಿಸಿದ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು. ಸುಮಾರು 35 ಮಹಿಳೆಯರು ಯಶಸ್ವಿಯಾಗಿ 30 ದಿನಗಳ ತರಬೇತಿ ಪೂರ್ಣಗೊಳಿಸಿ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.

ಮಹಿಳೆಯರಲ್ಲಿ ವೃತ್ತಿಪರ ಕೌಶಲ್ಯ, ಉದ್ಯಮಶೀಲತೆ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!