Yuvavahini

OCT 27, 2026 8.00 PM IST

ಯುವವಾಹಿನಿ (ರಿ.) ಮಂಗಳೂರು ಘಟಕ

ಕುದ್ರೋಳಿ ದಸರಾ ಸಂಭ್ರಮದಲ್ಲಿ ಕರ್ತವ್ಯ ನಿರ್ವಹಿಸಿದ ಸಂಚಾಲಕರು ಮತ್ತು ಮಾರ್ಗದರ್ಶಕರಿಗೆ ಗೌರವಾರ್ಪಣೆ

ಮಂಗಳೂರು ಅ‌27 : ದಸರಾ ಸಂಭ್ರಮದಂದು ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂ ಸೇವೆಯ ಮತ್ತು ದಸರಾ ಶೋಭಾಯಾತ್ರೆಯ ಜವಾಬ್ದಾರಿ ಹೊತ್ತು ಕರ್ತವ್ಯ ನಿರ್ವಹಿಸಿದ ಸಂಚಾಲಕರಿಗೆ ಗೌರವ ಸಲ್ಲಿಸುವುದು ಆದ್ಯ ಕರ್ತವ್ಯ.

ದಿನಾಂಕ: 27-10-2026 ರಂದು ಸಂಜೆ 6 ಗಂಟೆಗೆ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಗೋಪಾಲ್ ಪೂಜಾರಿ ಅವರು ಗುರು ಪೂಜೆ ನೆರವೇರಿಸಿದರು, ಅಂದಿನ ಗುರು ಪೂಜೆಯ ಸೇವೆಯನ್ನು ಎರಡನೇ ಉಪಾಧ್ಯಕ್ಷರು ಮಹೇಶ್ ಅಮೀನ್ ನೀಡಿದ್ದು ಪೂಜೆಯ ನಂತರ ಅವರಿಗೆ ಪ್ರಸಾದ ನೀಡಲಾಯಿತು. ಸಂಜೆ 7 ಗಂಟೆಗೆ ಗುರು ಪ್ರಾರ್ಥನೆಯೊಂದಿಗೆ ‌ಹರೀಶ್ ಕೆ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವು ಆರಂಭವಾಯಿತು. ಅಧ್ಯಕ್ಷರು ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಗತ ಸಭೆಗಳ ವರದಿ ವಾಚಿಸಿ ಸಭೆಯ ಅನುಮೋದನೆ ಪಡೆದರು‌.

ಅಧ್ಯಕ್ಷರು , ದಿನಾಂಕ: 11-10-2026 ರಿಂದ 21-10-2026 ವರೆಗೆ ವಿಜ್ರಂಭಣೆಯಿಂದ ನಡೆದ ಕುದ್ರೋಳಿ ದಸರಾ ಸಂಭ್ರಮದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ನಮ್ಮ ಘಟಕದ ವತಿಯಿಂದ ಪ್ರತೀ ದಿನ ಸಂಜೆ 6 ರಿಂದ ತಡರಾತ್ರಿ 12 ವರೆಗೆ ಸ್ವಯಂ ಸೇವಕರಾಗಿ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿದ ಮತ್ತು ದಸರಾ ಶೋಭಾಯಾತ್ರೆಯ ದಿನ ಪ್ರತೀ ವರ್ಷದಂತೆ ಈ ಬಾರಿ 12 ನೇ ವರ್ಷದ ಉಚಿತ ಶರ್ಬತ್ ಸೇವೆಯನ್ನು ಯಶಸ್ವಿಯಾಗಿ ನಿಷ್ಠೆಯಿಂದ, ನಿಸ್ವಾರ್ಥವಾಗಿ ಜವಾಬ್ದಾರಿ ಹೊಂದಿದ್ದ ಸಂಚಾಲಕರುಗಳಾದ ಯತೀಶ್ ಬಳಂಜ, ಶ್ರೀಕಾಂತ್ ಅಂಚನ್, ಸಹ ಸಂಚಾಲಕರಾದ ಚಂದ್ರಶೇಖರ ಕಿನ್ನಿಗೋಳಿ, ಸತೀಶ್ ಕೆ ಹಾಗೂ ಕಾರ್ಯದರ್ಶಿ ಉಷಾ, ಇವರಿಗೆ ಘಟಕದ ಪರವಾಗಿ ಮಾಜಿ ಅಧ್ಯಕ್ಷರುಗಳ ಮೂಲಕ ಗೌರವ ಸಲ್ಲಿಸಲಾಯಿತು.

ಅಧ್ಯಕ್ಷರು, ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂ ಸೇವೆ ನೆರವೇರಲು ಮಾರ್ಗದರ್ಶಕರಾಗಿದ್ದ ಘಟಕದ ಮಾಜಿ ಅಧ್ಯಕ್ಷರುಗಳಾದ ಗಣೇಶ್ ವಿ ಕೋಡಿಕಲ್, ಹರೀಶ್ ವಿ ಪಚ್ಚನಾಡಿ, ನವೀನ್ ಚಂದ್ರ ಪೂಜಾರಿ ಇವರಿಗೆ ಘಟಕದ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ದಸರಾ ಶೋಭಾಯಾತ್ರೆಯ ಸಂಭ್ರಮದಲ್ಲಿ ಉಚಿತ ಶರ್ಬತ್ ಸೇವೆಯಲ್ಲಿ ಮಾರ್ಗದರ್ಶಕರಾದ ನಾರಾಯಣ ಕರ್ಕೇರ ಮತ್ತು ಉತ್ತಮ ಸಹಕಾರ ನೀಡಿದ ಘಟಕದ ಮಾಜಿ ಅಧ್ಯಕ್ಷರಾದ ಯಶವಂತ ಪೂಜಾರಿ, ಸದಸ್ಯರಾದ ಸತೀಶ್ ಸಾಲ್ಯಾನ್, ಚಂದ್ರಶೇಖರ ಕೊಟ್ಟಾರ ಇವರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಸಭಾ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ದ್ವಿತೀಯ ಉಪಾಧ್ಯಕ್ಷರು ಮಹೇಶ್ ಅಮೀನ್ ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!