Yuvavahini

OCT 26, 2026 9.00 PM IST

ಯುವವಾಹಿನಿ ಮಂಗಳೂರು ಮಹಿಳಾ ಘಟಕದ 2026–27ನೇ ಸಾಲಿನ ಪದಗ್ರಹಣ ಸಮಾರಂಭ

ಮಹಿಳೆಯರಿಗೆ ಜವಾಬ್ದಾರಿ ನೀಡಿದರೆ ಸಾಧನೆ ಸಾಧ್ಯ: ಗೀತಾಂಜಲಿ ಸುವರ್ಣ

ಮಂಗಳೂರು ಅ‌ 26 : ಮಹಿಳೆಯರಿಗೆ ಜವಾಬ್ದಾರಿ ನೀಡಿದರೆ ಅವರು ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಲ್ಲರು ಎಂಬುದಕ್ಕೆ ಯುವವಾಹಿನಿ ಮಹಿಳಾ ಘಟಕವೇ ಸಾಕ್ಷಿಯಾಗಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಸಂಘ-ಸಂಸ್ಥೆಗಳೊಂದಿಗೆ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು ಎಂದು ರಾಷ್ಟ್ರೀಯ ಬಿಲ್ಲವ ಮಹಿಳಾ ಮಂಡಳಿ, ಕಟಪಾಡಿಯ ಅಧ್ಯಕ್ಷೆ ಗೀತಾಂಜಲಿ ಸುವರ್ಣ ಹೇಳಿದರು.

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಅಕ್ಟೋಬರ್ 26ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಾಜಿ ಅಧ್ಯಕ್ಷೆ ಉಮಾ ಶ್ರೀಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಸೋನಿಯಾ ರಾಜ್ 2025–26ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಆಯ್ಕೆ ಸಮಿತಿಯ ಸಂಚಾಲಕರಾದ ನೈನಾ ವಿಶ್ವನಾಥ್ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಹಿಳಾ ಘಟಕದ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದ ಅವರು, ನೂತನ ತಂಡವು ಹಂತ ಹಂತವಾಗಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಂಘಟನೆಯ ಮೂಲಕ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಮಾನವ ಸಂಪನ್ಮೂಲ ಮತ್ತು ನಿರ್ವಹಣಾ ತರಬೇತುದಾರೆ ದಿವ್ಯ ಸುವರ್ಣ ನೂತನ ತಂಡಕ್ಕೆ ಶುಭ ಹಾರೈಸಿದರು. ನಿರ್ಗಮನ ಅಧ್ಯಕ್ಷೆ ಕಸ್ತೂರಿ ಮಹೇಶ್ ಸಂಸ್ಥೆಯ ಮೇಲಿನ ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿ, ಮುಂದೆಯೂ ಘಟಕದ ಚಟುವಟಿಕೆಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹರೀಶ್ ಕೊಣಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು

ನೂತನ ಅಧ್ಯಕ್ಷೆ ದೀಪಿಕಾ ಮನೋಜ್ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಮತ್ತು ಪ್ರೇರಣೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಘಟಕವನ್ನು ಮುನ್ನಡೆಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು. ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ನೂತನ ತಂಡಕ್ಕೆ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. . ನೂತನ ಕಾರ್ಯದರ್ಶಿ ಪ್ರಿಯಾ ಸುರೇಶ್ ವಂದಿಸಿದರು. ಉಮಾ ಶ್ರೀಕಾಂತ್ ಹಾಗೂ ರವಿಕಲ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!