Yuvavahini

OCT 29, 2026 9.00 PM IST

ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 84

ಶಿಕ್ಷಣದಿಂದ ಜ್ಞಾನ, ಮಾನವೀಯತೆಯಿಂದ ಸಮಾನತೆಯ ಸಮಾಜ

ನಗ್ರಿ, ಅ. 29: ಶ್ರೀ ನಾರಾಯಣಗುರುಗಳು ಶಿಕ್ಷಣವನ್ನು ಸಾಮಾಜಿಕ ಪರಿವರ್ತನೆ, ಸ್ವಾಭಿಮಾನ ಮತ್ತು ಸಮಾನತೆಯ ಪ್ರಮುಖ ಸಾಧನವಾಗಿ ಪ್ರತಿಪಾದಿಸಿದರು. ಜಾತಿ-ಧರ್ಮದ ಭೇದಭಾವಗಳನ್ನು ಮೀರಿ ಮನುಷ್ಯರೆಲ್ಲರೂ ಸಮಾನರು ಎಂಬ ಮಾನವೀಯ ಸಂದೇಶವನ್ನು ಸಾರಿದ ಅವರು, ಜ್ಞಾನದ ಮೂಲಕ ಅಜ್ಞಾನ ಮತ್ತು ಸಾಮಾಜಿಕ ಅಸಮಾನತೆಗಳನ್ನು ನಿವಾರಿಸಲು ಕರೆ ನೀಡಿದರು ಎಂದು ನಿರೂಪಕ ರಾಜೇಶ್ ಬಲ್ಯ ತಿಳಿಸಿದರು.

ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ಒಂದಕ್ಕೊಂದು ಪೂರಕವಾದಾಗ ಮಾತ್ರ ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯ ನೆಲೆಸಲು ಸಾಧ್ಯ. ನಾರಾಯಣಗುರುಗಳ ಚಿಂತನೆಗಳು ಇಂದಿನ ಸಮಾಜಕ್ಕೂ ಜ್ಞಾನದ ಬೆಳಕು ಮತ್ತು ಮಾನವೀಯತೆಯ ದಾರಿದೀಪವಾಗಿವೆ ಎಂದರು.

ಅವರು ನಗ್ರಿಯ ಲತಾ ಹರೀಶ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 84ರಲ್ಲಿ ಗುರುಸಂದೇಶ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಸುಭಾಷ್ ನಗರ ಇದರ ಅಧ್ಯಕ್ಷ ಮೋಹನ್ ದಾಸ್ ಪೂಜಾರಿ ಸಜಿಪ, ಶ್ರೀ ಶಾರದಾ ಮಂದಿರದ ಮಾಜಿ ಅಧ್ಯಕ್ಷ ರತ್ನಾಕರ ಪೂಜಾರಿ, ನಾಡಾರ್ ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಪೂಜಾರಿ ಕೊಟ್ಟಾರಿ ಪಾಲು, ಯುವವಾಹಿನಿ ಬಂಟ್ವಾಳ ಘಟಕದ ಪ್ರಥಮ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷ ಹರೀಶ್ ಸಾಲ್ಯಾನ್ ಅಜೆಕಲ, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ನವೀನ್ ಕಾರಾಜೆ, ಸದಸ್ಯರಾದ ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ಸಂತೋಷ್ ಪೂಜಾರಿ ವಿಟ್ಲುಕೋಡಿ, ಶ್ರೇಯಾ ನಗ್ರಿ, ಆನಂದ ಪೂಜಾರಿ, ಸೃಜನಿ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ರಾಜೇಶ್ ಸುವರ್ಣ, ಶಿವಾನಂದ್ ಎಂ., ಅರುಣ್ ಮಹಾಕಾಳಿ ಪಡ್ಪು ಮತ್ತು ನಾಗೇಶ್ ಪೊನ್ನೋಡಿ ಉಪಸ್ಥಿತರಿದ್ದರು.

ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ, ಪೂರ್ವಿಕಾ, ತೇಜಸ್ ಹಾಗೂ ಭಜಕರಾದ ವಿನಯ್ ಆಚಾರ್ಯ ಸಂಗೀತ ಸೇವೆ ಸಲ್ಲಿಸಿದರು. ಆತಿಥ್ಯ ವಹಿಸಿದ ಹರೀಶ್ ಪೂಜಾರಿ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಅಧ್ಯಕ್ಷ ಕಿರಣ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!