Yuvavahini

OCT 26, 2026 10.00 AM IST

ಯುವವಾಹಿನಿ (ರಿ.) ಕೂಳೂರು ಘಟಕ

ಶಿವಗಿರಿ ಸೇರಿದಂತೆ ಪ್ರಮುಖ ಪುಣ್ಯಕ್ಷೇತ್ರಗಳ ಆಧ್ಯಾತ್ಮಿಕ ಯಾತ್ರೆ ಸಂಪನ್ನ

53 ಮಂದಿ ಸದಸ್ಯರಿಂದ ನಾರಾಯಣ ಗುರುಗಳ ಜನ್ಮಸ್ಥಳ, ಶಿವಗಿರಿ ಮಠ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳ ದರ್ಶನ

ಮಂಗಳೂರು ಅ 26 : ಬ್ರಹ್ಮಶ್ರೀ ನಾರಾಯಣ ಗುರುದೇವರ ತತ್ವಾದರ್ಶಗಳನ್ನು ಅರಿತು, ಅವರ ಜೀವನ ಸಂದೇಶವನ್ನು ಅನುಭವಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ ಶಿವಗಿರಿ–ರಾಮೇಶ್ವರ ಸೇರಿದಂತೆ ಪ್ರಮುಖ ಪುಣ್ಯಕ್ಷೇತ್ರಗಳ ಆಧ್ಯಾತ್ಮಿಕ ಯಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಘಟಕದ ಸದಸ್ಯರು ಸೇರಿದಂತೆ ಒಟ್ಟು 53 ಮಂದಿ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಅಕ್ಟೋಬರ್ 24ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರಯಾಣ ಆರಂಭಿಸಿದ ಯಾತ್ರಾರ್ಥಿಗಳು ಅಕ್ಟೋಬರ್ 25ರಂದು ಕೇರಳದ ವರ್ಕಳದ ಶಿವಗಿರಿ ಕ್ಷೇತ್ರವನ್ನು ತಲುಪಿದರು. ಅಲ್ಲಿ ಪೂಜ್ಯ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಶಿವಗಿರಿ ಮಠಕ್ಕೆ ತೆರಳಿ, ಶಾರದಾ ಪೀಠ, ಬ್ರಹ್ಮಶ್ರೀ ನಾರಾಯಣ ಗುರುದೇವರ ಮೂಲ ಸಮಾಧಿ ಹಾಗೂ ಯಜ್ಞಮಂಟಪವನ್ನು ಸಂದರ್ಶಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ನಾರಾಯಣ ಗುರುದೇವರ ಜನ್ಮಸ್ಥಳವಾದ ಚೆಂಬಳಂತಿಗೆ ಭೇಟಿ ನೀಡಿ, ಅವರ ಬಾಲ್ಯ ಮತ್ತು ಜೀವನದ ಮಹತ್ವವನ್ನು ಸ್ಮರಿಸಿದರು. ನಂತರ ಅರವಿಪುರಂ ಕ್ಷೇತ್ರಕ್ಕೆ ತೆರಳಿ ದೇವರ ದರ್ಶನ ಪಡೆದು ಕನ್ಯಾಕುಮಾರಿಗೆ ಪ್ರಯಾಣ ಬೆಳೆಸಿದರು. ಕನ್ಯಾಕುಮಾರಿಯಲ್ಲಿ ದೇವರ ದರ್ಶನದ ಬಳಿಕ ಮರುತ್ವಮಲೆ ಆಶ್ರಮದಲ್ಲಿ ವಾಸ್ತವ್ಯ ಹೂಡಿದರು.

ಅಕ್ಟೋಬರ್ 26ರಂದು ಮುಂಜಾನೆ ಮರುತ್ವಮಲೆಯ ಪವಿತ್ರ ಗುಹೆಗೆ ಕಾಲ್ನಡಿಗೆಯಲ್ಲಿ ತೆರಳಿ ದರ್ಶನ ಪಡೆದರು. ನಂತರ ಮಧುರೈಯ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಅಕ್ಟೋಬರ್ 27ರಂದು ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ಪಡೆದ ಬಳಿಕ ತಿರುವನಂತಪುರದ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರಕ್ಕೆ ತೆರಳಿ ದೇವರ ದರ್ಶನ ಮಾಡಿದರು. ಅಲ್ಲಿಂದ ರೈಲಿನ ಮೂಲಕ ಮಂಗಳೂರಿಗೆ ಮರಳುವ ಮೂಲಕ ಯಾತ್ರೆ ಪೂರ್ಣಗೊಂಡಿತು.

ಯಾತ್ರೆಯ ಸಂಚಾಲಕತ್ವವನ್ನು ಯುವವಾಹಿನಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕಿ ಮಧುಶ್ರೀ ಪ್ರಶಾಂತ್ ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಗಳ ಆಶೀರ್ವಾದ, ಯುವವಾಹಿನಿ ಮಂಗಳೂರು ಘಟಕದ ಸದಾನಂದ ಪೂಜಾರಿ ಅವರ ಮಾರ್ಗದರ್ಶನ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಯನ ರಮೇಶ್ ಮತ್ತು ಯಶವಂತ ಪೂಜಾರಿ ಅವರ ಸಲಹೆ ಸಹಕಾರದೊಂದಿಗೆ ಯಾತ್ರೆ ಯಶಸ್ವಿಯಾಗಿ ನಡೆಯಿತು.

ಘಟಕದ ಅಧ್ಯಕ್ಷೆ ಗೀತಾ ವಸಂತ್ ಹಾಗೂ ದ್ವಿತೀಯ ಉಪಾಧ್ಯಕ್ಷೆ ತುಳಸಿ ಸುಜೀರ್ ಅವರ ಸಂಪೂರ್ಣ ಬೆಂಬಲದೊಂದಿಗೆ ಸದಸ್ಯರು ಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಆಧ್ಯಾತ್ಮಿಕ ಚಿಂತನೆ, ಗುರುತತ್ವದ ಅರಿವು ಹಾಗೂ ಪರಸ್ಪರ ಬಾಂಧವ್ಯವನ್ನು ಗಟ್ಟಿಗೊಳಿಸಿದ ಈ ಯಾತ್ರೆ ಭಾಗವಹಿಸಿದ ಎಲ್ಲರಿಗೂ ಸ್ಮರಣೀಯ ಅನುಭವವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!