Yuvavahini

NOV 05, 2026 8.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 85

ಮಾನವೀಯತೆಯಲ್ಲೇ ದೈವತ್ವದ ದರ್ಶನ ಮಾಡಿಸಿದ ನಾರಾಯಣಗುರು – ಮೋಹನ್ ಮಾಡೂರು

ಮಂಗಳೂರು ನ 05 : ದೇವರನ್ನು ದೇವಾಲಯಗಳಲ್ಲಿ ಮಾತ್ರ ಹುಡುಕದೆ, ಮನುಷ್ಯನಲ್ಲಿರುವ ಪ್ರೀತಿ, ಕರುಣೆ, ಸಹಾನುಭೂತಿ ಮತ್ತು ಮಾನವೀಯತೆಯಲ್ಲಿಯೇ ದೈವತ್ವವನ್ನು ಕಾಣುವ ವಿಶಿಷ್ಟ ತತ್ವವನ್ನು ಜಗತ್ತಿಗೆ ಸಾರಿದವರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಮೋಹನ್ ಮಾಡೂರು ಹೇಳಿದರು.

ನಾರಾಯಣಗುರುಗಳ ಚಿಂತನೆ ಕೇವಲ ಧಾರ್ಮಿಕ ಸುಧಾರಣೆಗೆ ಸೀಮಿತವಾಗಿರದೆ, ಮನುಷ್ಯನ ಅಂತರಂಗದ ಪರಿವರ್ತನೆ ಹಾಗೂ ಸಮಾಜದ ಸಮಗ್ರ ಉನ್ನತಿಯನ್ನು ಗುರಿಯಾಗಿಸಿಕೊಂಡಿತ್ತುಜಾತಿ, ಮತ, ವರ್ಗಗಳ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ ಗುರುಗಳು, ಪ್ರತಿಯೊಬ್ಬ ಮನುಷ್ಯನಿಗೂ ಸಮಾನ ಗೌರವ ಮತ್ತು ಘನತೆಯಿಂದ ಬದುಕುವ ಹಕ್ಕಿದೆ ಎಂಬುದನ್ನು ಪ್ರತಿಪಾದಿಸಿದರು.

ಶಿಕ್ಷಣದಿಂದ ಜ್ಞಾನ, ಸಂಘಟನೆಯಿಂದ ಶಕ್ತಿ ಹಾಗೂ ಉದ್ಯಮದಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂಬ ದೂರದೃಷ್ಟಿಯ ಚಿಂತನೆಯನ್ನು ಸಮಾಜಕ್ಕೆ ನೀಡಿದರು. ಮನುಷ್ಯನಲ್ಲಿರುವ ಅಜ್ಞಾನ, ಅಹಂಕಾರ, ದ್ವೇಷ ಮತ್ತು ಮೌಢ್ಯಗಳನ್ನು ದೂರಮಾಡಿ ಪ್ರೀತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವವನ್ನು ಬೆಳೆಸುವುದೇ ನಿಜವಾದ ಆಧ್ಯಾತ್ಮಿಕ ಸಾಧನೆ ಎಂಬ ಸಂದೇಶವನ್ನು ತಮ್ಮ ಬದುಕು ಮತ್ತು ತತ್ವಗಳ ಮೂಲಕ ಸಾರಿದರು.

ಅವರು ನವೆಂಬರ್ 5, 2026ರಂದು ಮೂರ್ಜೆ ಮಾರಪ್ಪ ಪೂಜಾರಿಯವರ ನಂದನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 85ರಲ್ಲಿ ಗುರುಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಜೊರೇ ಮಾರುತಿ ಕುಣಿತ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ, ಆಕಾಶ್ ಗುರುವಾಯನಕೆರೆ, ಯುವವಾಹಿನಿ ಬಂಟ್ವಾಳ ಘಟಕದ ಪ್ರಥಮ ಉಪಾಧ್ಯಕ್ಷರಾದ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ , ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ , ಶೇಖರ್ ಅಗಲ್ದೋಡಿ, ನವೀನ್ ಕುಡ್ಮೇರ್, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ರಾಜೇಶ್ ಸುವರ್ಣ, ಶಿವಾನಂದ ಎಮ್, ಅರುಣ್ ಮಹಾಕಾಳಿ ಪಡ್ಪು , ನಾಗೇಶ್ ಪೊನ್ನೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ ಮತ್ತು ಭಜಕರಾದ ವಿನಯ್ ಆಚಾರ್ಯ ಸಂಗೀತದಲ್ಲಿ ಸಹಕರಿಸಿದರು

ಆತಿಥ್ಯ ವಹಿಸಿದ ಸರಿತಾ ರಮಾನಂದ ಇವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಸಮರ್ಪಿಸಿದರು. ಘಟಕದ ಅಧ್ಯಕ್ಷರಾದ ಕಿರಣ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!