Yuvavahini

OCT 31, 2026 9.00 PM IST

ಯುವವಾಹಿನಿ (ರಿ.) ಬಜಪೆ ಘಟಕ

ಅಧ್ಯಾತ್ಮ, ಪ್ರಕೃತಿ ಸೌಂದರ್ಯದ ನಡುವೆ ಪುಣ್ಯಕ್ಷೇತ್ರಗಳ ದರ್ಶನ

ಧಾರ್ಮಿಕ ಕ್ಷೇತ್ರಗಳ ಭೇಟಿಯೊಂದಿಗೆ ಸದಸ್ಯರ ಸ್ನೇಹ-ಸಂಪರ್ಕಕ್ಕೆ ಹೊಸ ಕೊಂಡಿ

ಬಜಪೆ ಅ 31 : ಅಧ್ಯಾತ್ಮ, ಭಕ್ತಿ, ಪ್ರಕೃತಿ ಸೌಂದರ್ಯ ಹಾಗೂ ಸ್ನೇಹಸಂಬಂಧಗಳ ಸಮ್ಮಿಲನದೊಂದಿಗೆ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಅಕ್ಟೋಬರ್ 31ರಂದು ಒಂದು ದಿನದ ಪುಣ್ಯಕ್ಷೇತ್ರಗಳ ಯಾತ್ರೆಯನ್ನು ಕೈಗೊಂಡರು.

ಬಜಪೆಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಿಂದ ಮುಂಜಾನೆ 4.30ಕ್ಕೆ ಯಾತ್ರೆ ಆರಂಭಗೊಂಡಿತು. ಮೊದಲಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದ ಸದಸ್ಯರು, ಬಳಿಕ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ನಿತ್ಯಪೂಜೆಯಲ್ಲಿ ಪಾಲ್ಗೊಂಡರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವರ ಬಲಿಯನ್ನು ಕಣ್ತುಂಬಿಕೊಂಡು ಭಕ್ತಿಭಾವದಿಂದ ಪುನೀತರಾದರು.

ಮುಂದೆ ಇಕ್ಕೇರಿ ಶ್ರೀ ಅಘೋರೇಶ್ವರ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಶನೈಶ್ವರ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿದರು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ತಾಯಿಯ ಕುಂಕುಮಾರ್ಚನೆ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿ ದೇವಿಯ ಆಶೀರ್ವಾದ ಪಡೆದರು. ಧಾರ್ಮಿಕ ಕ್ಷೇತ್ರಗಳ ದರ್ಶನದ ಬಳಿಕ ವಿಶ್ವವಿಖ್ಯಾತ ಸಿಗಂದೂರು ಸೇತುವೆಯನ್ನು ವೀಕ್ಷಿಸಿ, ಜಗತ್ಪ್ರಸಿದ್ಧ ಜೋಗ ಜಲಪಾತದ ನಿಸರ್ಗ ಸೌಂದರ್ಯವನ್ನು ಸವಿದರು. ಸಂಜೆ 6 ಗಂಟೆಗೆ ಬಜಪೆಯತ್ತ ಪ್ರಯಾಣ ಬೆಳೆಸಿದರು.

ಸದಸ್ಯರ ಸಕ್ರಿಯ ಭಾಗವಹಿಸುವಿಕೆ, ಪರಸ್ಪರ ಸಹಕಾರ ಹಾಗೂ ಉತ್ಸಾಹ ಯಾತ್ರೆಗೆ ವಿಶೇಷ ಮೆರುಗು ನೀಡಿತು. ಅಧ್ಯಾತ್ಮ ಮತ್ತು ಪ್ರಕೃತಿಯ ಸೊಬಗಿನೊಂದಿಗೆ ಸ್ನೇಹ, ಸಡಗರ ಹಾಗೂ ಸಂತೋಷವನ್ನು ಹಂಚಿಕೊಂಡ ಈ ಪ್ರವಾಸವು ಸದಸ್ಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವುದರ ಜೊತೆಗೆ ಯುವವಾಹಿನಿಯ ಸಂಪರ್ಕದ ಕೊಂಡಿಯನ್ನು ಮತ್ತಷ್ಟು ಬಲಪಡಿಸಿತು. ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷ ರೋಹಿತ್ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಯುವವಾಹಿನಿ ಕುಪ್ಪೆಪದವು–ಎಡಪದವು ಘಟಕದ ಸ್ಥಾಪಕ ಅಧ್ಯಕ್ಷ ಅರುಣ್ ಕುಮಾರ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!