Yuvavahini

NOV 08, 2026 8.00 PM IST

ಯುವವಾಹಿನಿ ಸುಳ್ಯ ಘಟಕದ ವತಿಯಿಂದ ಗುರುಸ್ಫೂರ್ತಿ ಕಾರ್ಯಕ್ರಮ

ಮಹಾತ್ಮರನ್ನು ಆರಾಧನೆಗೆ ಸೀಮಿತಗೊಳಿಸದೆ ಅವರ ವಿಚಾರಗಳನ್ನು ಅನುಸರಿಸೋಣ – ಸುಧಾಕರ ಸುವರ್ಣ

ಸುಳ್ಯ ನ 08 : ಬ್ರಹ್ಮಶ್ರೀ ನಾರಾಯಣ ಗುರುಗಳಂತಹ ಮಹಾತ್ಮರನ್ನು ಗುಡಿ ಕಟ್ಟಿ ಆರಾಧನೆಗೆ ಮಾತ್ರ ಸೀಮಿತಗೊಳಿಸದೆ, ಅವರ ಚಿಂತನೆ ಮತ್ತು ಆದರ್ಶಗಳನ್ನು ಮನನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪತ್ರಕರ್ತ ಸುಧಾಕರ ಸುವರ್ಣ ತಿಂಗಳಾಡಿ ಹೇಳಿದರು.

ಅವರು ನವೆಂಬರ್ 8ರಂದು ಸುಳ್ಯ ತಾಲೂಕು ಯುವವಾಹಿನಿ ಘಟಕದ ವತಿಯಿಂದ ಸುಳ್ಯದ ಕಾನತ್ತಿಲದಲ್ಲಿರುವ ಸುಂದರ ಪೂಜಾರಿಯವರ ಮನೆಯಲ್ಲಿ ಆಯೋಜಿಸಲಾದ ‘ಗುರುಸ್ಫೂರ್ತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾರಾಯಣ ಗುರುಗಳ ತತ್ವಚಿಂತನೆ, ಸಾಮಾಜಿಕ ಪರಿವರ್ತನೆಯ ಸಂದೇಶ ಹಾಗೂ ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳ ಕುರಿತು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ನವೆಂಬರ್ 22ರಂದು ನಡೆಯಲಿರುವ ಯುವವಾಹಿನಿ ಸುಳ್ಯ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಕಲ್ಲಪಣೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕ ಲೋಹಿತ್ ರೆಂಜಾಳ, ಕಾರ್ಯದರ್ಶಿ ರಂಜಿತ್ ದರ್ಕಾಸ್ ಹಾಗೂ ಕೋಶಾಧಿಕಾರಿ ಹರೀಶ್ ದೋಳ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಆತಿಥ್ಯ ನೀಡಿದ ಸುಂದರ ಪೂಜಾರಿ ಮಾತನಾಡಿದರು. ಘಟಕದ ಮಾಜಿ ಅಧ್ಯಕ್ಷ ಚಂದ್ರಶೇಖರ ಹೈದಂಗೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಿಯೋಜಿತ ಅಧ್ಯಕ್ಷೆ ನೂತನಾ ಪ್ರವೀಣ್ ನೆಟ್ಟಾರು ಸೇರಿದಂತೆ ಹಲವು ಸಮಾಜ ಬಾಂಧವರು ಉಪಸ್ಥಿತರಿದ್ದರು. ಆರಂಭದಲ್ಲಿ ಗುರುಸ್ಮರಣೆಯ ಅಂಗವಾಗಿ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಲಘು ಉಪಾಹಾರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ನಾರಾಯಣ ಗುರುಗಳ ಆದರ್ಶಗಳನ್ನು ಸ್ಮರಿಸುವುದರ ಜೊತೆಗೆ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರೇರಣೆ ನೀಡಿದ ಗುರುಸ್ಫೂರ್ತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!