Yuvavahini

NOV 07, 2026 1.00 PM IST

ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗೆ ಯುವವಾಹಿನಿಯ ಕಾಳಜಿ – ಲೇಡಿಗೋಷನ್ ಆಸ್ಪತ್ರೆಗೆ NST ಸಾಧನ ಕೊಡುಗೆ

ಇತರ ಸಂಘ ಸಂಸ್ಥೆಗಳಿಗೆ ಯುವವಾಹಿನಿ ಮಾದರಿ ಸಂಘಟನೆ: ಸಚಿವ ಯು.ಟಿ. ಖಾದರ್ ಫರೀದ್

ಮಂಗಳೂರು, ನ. 07: ಸಮಾಜಮುಖಿ ಸೇವೆ, ಶಿಕ್ಷಣ, ಉದ್ಯೋಗ ಹಾಗೂ ಯುವಜನತೆಯ ಸಬಲೀಕರಣದ ಮೂಲಕ ಯುವವಾಹಿನಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿ ಬೆಳೆದು ನಿಂತಿದೆ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಹೇಳಿದರು.

ಯುವವಾಹಿನಿ ಕೇವಲ ಒಂದು ಸಂಘಟನೆಯಾಗಿ ಕಾರ್ಯನಿರ್ವಹಿಸದೆ, ಸಂಘಟನಾತ್ಮಕ ಶಿಸ್ತು, ಸಮಾಜಮುಖಿ ಕಾಳಜಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಸೇವಾ ಮನೋಭಾವದ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿದೆ. ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ತನ್ನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ರೂಪಿಸುತ್ತಿರುವುದು ಶ್ಲಾಘನೀಯ. ಗರ್ಭಿಣಿಯರು ಮತ್ತು ಗರ್ಭಸ್ಥ ಶಿಶುವಿನ ಆರೋಗ್ಯ ತಪಾಸಣೆಗೆ ಉಪಯುಕ್ತವಾದ NST (Foetal Tocographic) ಸಾಧನವನ್ನು ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಹಸ್ತಾಂತರಿಸುವ ಮೂಲಕ ಯುವವಾಹಿನಿ ತನ್ನ ಸಾಮಾಜಿಕ ಕಳಕಳಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇಂತಹ ಸಮಾಜಮುಖಿ ಕಾರ್ಯಗಳು ಇತರ ಸಂಘ ಸಂಸ್ಥೆಗಳಿಗೂ ಪ್ರೇರಣೆಯಾಗಲಿ ಎಂದು ಅವರು ಅಭಿಪ್ರಾಯಪಟ್ಟರು.

ಅವರು ನವೆಂಬರ್ 07ರಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಗರ್ಭಸ್ಥ ಶಿಶುವಿನ ಹೃದಯ ಬಡಿತ ಹಾಗೂ ಗರ್ಭಿಣಿಯರ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಬಳಸುವ NST (Foetal Tocographic) ಸಾಧನವನ್ನು ಹಸ್ತಾಂತರಿಸಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಸಭೆಯ ಅಧ್ಯಕ್ಷತೆ ವಹಿಸಿದ್ದರು

ಈ ಸಂದರ್ಭದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಕ್ಷಿತ್ ಶಿವರಾಮ್, ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ತಿಮ್ಮಯ್ಯ ಹಾಗೂ ಮಂಗಳೂರು ಕೆಎಂಸಿ ಡೀನ್ ಉನ್ನಿಕೃಷ್ಣನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, NST ಸಾಧನದ ವೈದ್ಯಕೀಯ ಉಪಯೋಗ ಹಾಗೂ ಗರ್ಭಿಣಿಯರು ಮತ್ತು ಗರ್ಭಸ್ಥ ಶಿಶುವಿನ ಆರೋಗ್ಯದ ಮೇಲ್ವಿಚಾರಣೆಯಲ್ಲಿ ಅದರ ಮಹತ್ವವನ್ನು ವಿವರಿಸಿದರು. ಅಲ್ಲದೆ, ಯುವವಾಹಿನಿ ಸಂಸ್ಥೆಯ ಈ ಕೊಡುಗೆಯನ್ನು ಶ್ಲಾಘಿಸಿದರು.

ಯುವವಾಹಿನಿ (ರಿ.) ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಕಾರ್ಯದರ್ಶಿ ದಕ್ಷಾ ಹಾಗೂ ಸಮಾಜ ಸೇವಾ ನಿರ್ದೇಶಕ ದಿನೇಶ್ ಪೂಜಾರಿ ಉಪಸ್ಥಿತರಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ನಿತೀಶ್ ಎಚ್. ಕೋಟ್ಯಾನ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ವಂದಿಸಿದರು. ಸೌಮ್ಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!