Yuvavahini

NOV 06, 2026 9.00 PM IST

ಹಬ್ಬದ ಬೆಳಕಿನೊಂದಿಗೆ ಮಾನವೀಯತೆಯ ಸಂದೇಶ ಸಾರಿದ ಯುವವಾಹಿನಿ ಕೂಳೂರು ಘಟಕ

ದೀಪಾವಳಿಯ ಸಂಭ್ರಮದಲ್ಲಿ ಮಾನವೀಯತೆ ಬೆಳಕು : ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ

ಕೂಳೂರು ನ‌ 06: ಬೆಳಕಿನ ಹಬ್ಬ ದೀಪಾವಳಿಯನ್ನು ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳೊಂದಿಗೂ ಸಂತೋಷದಿಂದ ಆಚರಿಸುವ ಸದುದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಬಡ ಹಾಗೂ ಅಶಕ್ತ ಕುಟುಂಬಗಳಿಗೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಧಾನ್ಯಗಳ ರೇಷನ್ ಕಿಟ್ ವಿತರಿಸುವ ಮಾನವೀಯ ಸೇವಾ ಕಾರ್ಯಕ್ರಮವು ನವೆಂಬರ್ 6, 2026ರಂದು ನಡೆಯಿತು.

ಘಟಕದ ಫಲ್ಗುಣಿ ಸಭಾಂಗಣದಲ್ಲಿ ಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಜೀವನ ನಿರ್ವಹಣೆಗೆ ಕಷ್ಟಪಡುತ್ತಿರುವ ಅರ್ಹ ಕುಟುಂಬಗಳನ್ನು ಗುರುತಿಸಿ, ಅಕ್ಕಿ, ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಸೇರಿದಂತೆ ಒಂದು ತಿಂಗಳಿಗೆ ಅಗತ್ಯವಿರುವ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು.

ದೀಪಾವಳಿಯ ಬೆಳಕು ಪ್ರತಿಯೊಂದು ಮನೆಯಲ್ಲೂ ಸಂತೋಷವನ್ನು ಮೂಡಿಸಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಯಾವುದೇ ಕುಟುಂಬವೂ ಹಬ್ಬದ ಸಂಭ್ರಮದಿಂದ ವಂಚಿತವಾಗಬಾರದು ಹಾಗೂ ಹಸಿವಿನ ನೋವಿನ ನಡುವೆ ಹಬ್ಬವನ್ನು ಆಚರಿಸುವ ಪರಿಸ್ಥಿತಿ ಯಾರಿಗೂ ಬರಬಾರದು ಎಂಬ ಮಾನವೀಯ ಆಶಯದೊಂದಿಗೆ ಈ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷೆ ಗೀತಾ ವಸಂತ್, ನಿಕಟಪೂರ್ವ ಅಧ್ಯಕ್ಷ ಲತೀಶ್ ಪೂಜಾರಿ, ಸಂಚಾಲಕಿ ಹರಿಣಿ ಮಾಲೆಮಾರ್, ಕಾರ್ಯದರ್ಶಿ ವಂದೀಪ್, ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ.ಎಸ್., ಇಂದಿರಾ ಸುರೇಶ್, ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸೇವಾ ಕಾರ್ಯಕ್ಕೆ ಸಹಕಾರ ನೀಡಿದ ದಾನಿಗಳು, ಹಿತೈಷಿಗಳು ಹಾಗೂ ಸರ್ವ ಸದಸ್ಯರಿಗೆ ಘಟಕದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ಹಬ್ಬದ ಆಚರಣೆಯು ಕೇವಲ ಸಂಭ್ರಮಕ್ಕೆ ಸೀಮಿತವಾಗದೆ, ಹಸಿದವರ ಮುಖದಲ್ಲಿ ನಗು ಮೂಡಿಸುವ ಮತ್ತು ಸಂಕಷ್ಟದಲ್ಲಿರುವವರ ಬದುಕಿಗೆ ಆಸರೆಯಾಗುವ ಮಾನವೀಯ ಕಾರ್ಯಗಳ ಮೂಲಕ ಸಾರ್ಥಕವಾಗಬೇಕು ಎಂಬ ಸಂದೇಶವನ್ನು ಯುವವಾಹಿನಿ ಕೂಳೂರು ಘಟಕದ ಈ ಸೇವಾ ಕಾರ್ಯ ಸಾರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!