Yuvavahini

NOV 09, 2026 8.00 PM IST

ಯುವವಾಹಿನಿ ಮಂಗಳೂರು ಮಹಿಳಾ ಘಟಕ – ಚಿಣ್ಣರ ತಂಗುಧಾಮದಲ್ಲಿ ಅರ್ಥಪೂರ್ಣ ದೀಪಾವಳಿ ಸಂಭ್ರಮ

ಮಕ್ಕಳ ಸಂತಸವೇ ದೀಪಾವಳಿಯ ಬೆಳಕು – ಚಿಣ್ಣರೊಂದಿಗೆ ಸಂಭ್ರಮ

ಮಂಗಳೂರು ನ 09 : ಹಬ್ಬಗಳ ಸಂಭ್ರಮವು ಕೇವಲ ನಮ್ಮ ಮನೆಗಳಿಗೆ ಸೀಮಿತವಾಗದೆ, ಸಮಾಜದ ಪ್ರತಿಯೊಬ್ಬರ ಬದುಕಿನಲ್ಲೂ ಸಂತೋಷದ ಬೆಳಕು ಮೂಡಿಸಬೇಕು ಎಂಬ ಆಶಯದೊಂದಿಗೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕವು ಬಿಜೈ ಕಾಪಿಕಾಡ್‌ನ ಚಿಣ್ಣರ ತಂಗುಧಾಮದಲ್ಲಿ ಪುಟಾಣಿ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿತು.

ನವೆಂಬರ್ 9ರಂದು ಸಂಜೆ ನಡೆದ ಕಾರ್ಯಕ್ರಮವು ದೀಪ ಪ್ರಜ್ವಲನೆ ಹಾಗೂ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮುಖ್ಯ ಅತಿಥಿಯಾಗಿ ಸಂತೋಷ್ ಕುಲಾಲ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷೆ ದೀಪಿಕಾ ಮನೋಜ್, ಕಾರ್ಯದರ್ಶಿ ಪ್ರಿಯಾ ಸುರೇಶ್ ಹಾಗೂ ಸಮಾಜ ಸೇವಾ ನಿರ್ದೇಶಕಿ ಲತಾ ಪೂಜಾರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಮಕ್ಕಳಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಮನರಂಜನಾ ಸ್ಪರ್ಧೆಗಳು, ಆಟಗಳು, ನೃತ್ಯ ಹಾಗೂ ಗಾಯನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳ ಅಮೃತಹಸ್ತದಿಂದ ಬಹುಮಾನ ವಿತರಿಸಲಾಯಿತು. ಮಕ್ಕಳೊಂದಿಗೆ ಸಂತೋಷ ಹಂಚಿಕೊಳ್ಳುವ ಸದುದ್ದೇಶದಿಂದ ಸಿಹಿತಿಂಡಿ, ಸಂಜೆಯ ಉಪಾಹಾರ, ಬಾದಾಮಿ ಹಾಲು ಹಾಗೂ ಪಟಾಕಿಗಳನ್ನು ವಿತರಿಸಲಾಯಿತು. ಬಳಿಕ ಮಕ್ಕಳೊಂದಿಗೆ ಪಟಾಕಿ ಸಿಡಿಸಿ ದೀಪಾವಳಿಯ ಸಂಭ್ರಮವನ್ನು ಹಂಚಿಕೊಂಡರು. ಮಕ್ಕಳ ಮುಖದಲ್ಲಿ ಮೂಡಿದ ನಗು ಮತ್ತು ಉಲ್ಲಾಸ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಕಾರ್ಯಕ್ರಮದಲ್ಲಿ ಸಂತೋಷ್ ಕುಲಾಲ್ ಹಾಗೂ ಘಟಕದ ಅಧ್ಯಕ್ಷೆ ದೀಪಿಕಾ ಮನೋಜ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪ್ರಿಯಾ ಸುರೇಶ್ ಸ್ವಾಗತಿಸಿದರು. ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ರೂಪಾ ಜನಾರ್ದನ್ ವಂದಿಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಮನೋಜ್ ಕುಮಾರ್, ನಿವೃತ್ತ ಪೊಲೀಸ್ ಉಪನಿರೀಕ್ಷಕ ರೋಹಿತಾಶ್ವ, ಯುವವಾಹಿನಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ವಾಣಿ ರೋಹಿತಾಶ್ವ, ಮಾಜಿ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉಪಸ್ಥಿತರಿದ್ದರು.

ಮಕ್ಕಳೊಂದಿಗೆ ಬೆರೆತು, ಅವರ ಸಂತೋಷದಲ್ಲಿ ತಮ್ಮ ಸಂತೋಷವನ್ನು ಕಂಡುಕೊಂಡ ಮಹಿಳಾ ಘಟಕದ ಈ ಮಾನವೀಯ ನಡೆ ದೀಪಾವಳಿ ಆಚರಣೆಗೆ ವಿಶೇಷ ಅರ್ಥವನ್ನು ನೀಡಿತು. ಹಬ್ಬದ ಬೆಳಕಿನೊಂದಿಗೆ ಪ್ರೀತಿ, ಆತ್ಮೀಯತೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರಿದ ಈ ಕಾರ್ಯಕ್ರಮವು ಎಲ್ಲರ ಮನದಲ್ಲಿ ಸ್ಮರಣೀಯವಾಗಿ ಉಳಿಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!