Yuvavahini

NOV 08, 2026 7.00 PM IST

ದೋಳದ ಅಪ್ಪೆಯೊಂದಿಗೆ ದೀಪಾವಳಿ ಆಚರಿಸಿದ ಯುವವಾಹಿನಿ ಕಡಬ ಘಟಕ

ಹಣತೆಯ ಬೆಳಕಿಗಿಂತ ಮಿಗಿಲಾದ ಪ್ರೀತಿಯ ಬೆಳಕು ಮೂಡಿಸಿದ ದೀಪಾವಳಿ ಸಂಭ್ರಮ

ಕಡಬ ನ. 08 : ದೀಪಾವಳಿ ಎಂದರೆ ಕೇವಲ ಹಣತೆ ಬೆಳಗಿಸಿ ಪಟಾಕಿ ಸಿಡಿಸುವ ಹಬ್ಬವಲ್ಲ; ಮತ್ತೊಬ್ಬರ ಬದುಕಿನಲ್ಲಿ ಪ್ರೀತಿ, ವಿಶ್ವಾಸ ಹಾಗೂ ಸಂತೋಷದ ಬೆಳಕು ಮೂಡಿಸುವ ಮಾನವೀಯತೆಯ ಹಬ್ಬ ಎಂಬುದನ್ನು ಯುವವಾಹಿನಿ (ರಿ.) ಕಡಬ ಘಟಕವು ವಿಶಿಷ್ಟವಾಗಿ ಸಾರಿತು.

ದೀಪಾವಳಿ ಪ್ರಯುಕ್ತ ಕಡಬದ ಉಮ್ಮಕ್ಕ ಯಾನೆ ದೋಳದ ಅಪ್ಪೆ ಅವರ ಮನೆಯಲ್ಲಿ ನವೆಂಬರ್ 8ರಂದು ‘ಕರುಣೆಯ ಬೆಳಕು’ ಎಂಬ ಶೀರ್ಷಿಕೆಯಡಿ ಅರ್ಥಪೂರ್ಣ ದೀಪಾವಳಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು. ದೋಳದ ಅಪ್ಪೆ ಅವರು ಹಣತೆ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುಮಾರು 100 ಮಂದಿ ಯುವವಾಹಿನಿ ಸದಸ್ಯರು ಹಾಗೂ ಬಂಧುಗಳು ಭಾಗವಹಿಸಿ, ದೋಳದ ಅಪ್ಪೆಯವರೊಂದಿಗೆ ಕುಟುಂಬದ ಸದಸ್ಯರಂತೆ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ಅವರಿಗೆ ಸೀರೆ ನೀಡಿ ಗೌರವಿಸಿ ಆಶೀರ್ವಾದ ಪಡೆಯಲಾಯಿತು. ನಂದೀಶ್ ಅಲಂಕಾರ್ ಅವರು ದೋಳದ ಅಪ್ಪೆಯವರನ್ನು ತಾಯಿಯ ಸ್ಥಾನದಲ್ಲಿರಿಸಿ ದೀಪಾವಳಿ ಉಡುಗೊರೆಯಾಗಿ ಮಿಕ್ಸಿಯನ್ನು ನೀಡುವ ಮೂಲಕ ವಿಶೇಷ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದರು.

ಮನೆಯ ಅಂಗಳದಲ್ಲಿ ಹಣತೆಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಸದಸ್ಯರು ಒಟ್ಟಾಗಿ ಭೋಜನ ಸವಿದರು. ಬಳಿಕ ಜೇನಿನ ಗೂಡು ಸೇರಿದಂತೆ ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ವಯಸ್ಸಿನ ಅಂತರವನ್ನು ಮರೆತು ಎಲ್ಲರೂ ಒಂದಾಗಿ ಕುಣಿದು ಕುಪ್ಪಳಿಸಿದ ಕ್ಷಣಗಳು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದವು.

‘ಯಾರೂ ಒಂಟಿಯಲ್ಲ, ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಭರವಸೆಯನ್ನು ಮೂಡಿಸುವುದರೊಂದಿಗೆ, ಯುವವಾಹಿನಿ ಕೇವಲ ಒಂದು ಸಂಘಟನೆಯಲ್ಲ; ಅದು ಪ್ರೀತಿ, ವಿಶ್ವಾಸ ಮತ್ತು ಮಾನವೀಯತೆಯಿಂದ ಬೆಸೆದ ಕುಟುಂಬ ಎಂಬುದನ್ನು ಘಟಕದ ಅಧ್ಯಕ್ಷ ಉಮೇಶ್ ಬಳ್ಪ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಭಾವುಕರಾಗಿ ನುಡಿದರು.

ರಕ್ತಸಂಬಂಧವೊಂದೇ ಪ್ರೀತಿಗೆ ಮಾನದಂಡವಲ್ಲ; ನಿಷ್ಕಲ್ಮಶ ಪ್ರೀತಿ, ಕಾಳಜಿ ಮತ್ತು ಆತ್ಮೀಯತೆಯೇ ನಿಜವಾದ ಮಾನವೀಯ ಸಂಬಂಧ ಎಂಬುದನ್ನು ಈ ಕಾರ್ಯಕ್ರಮ ಸಾಬೀತುಪಡಿಸಿತು. ಕಾರ್ಯಕ್ರಮದಲ್ಲಿ ಶಿವಪ್ರಸಾದ್ ನೂಚಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತಿನ ಮಲ್ಲಿ ಸುಪ್ರೀತಾ ಚರಣ್ ಪಾಲಪ್ಪೆ ಕಾರ್ಯಕ್ರಮ ನಿರೂಪಿಸಿದರು. ನಿಯೋಜಿತ ಅಧ್ಯಕ್ಷೆ ಸರಿತಾ ಉಂಡಿಲ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಙನ, ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಚಿನ್ನಪ್ಪ ಪೂಜಾರಿ ಕೊರಪ್ಪಣೆ, ತಾಲೂಕು ಮಹಿಳಾ ಬಿಲ್ಲವ ಸಂಘ (ರಿ.) ಪುತ್ತೂರು ಇದರ ಉಪಾಧ್ಯಕ್ಷೆ ಶ್ವೇತಾ ಕುದುಂಬೂರು, ನಿಯೋಜಿತ ಉಪಾಧ್ಯಕ್ಷ ಜಯಪ್ರಕಾಶ್ ದೋಳ, ನಿಯೋಜಿತ ಕಾರ್ಯದರ್ಶಿ ಧನಂಜಯ ಮರ್ದಾಳ ಸೇರಿದಂತೆ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಒಂದು ಮನೆಯ ಅಂಗಳದಲ್ಲಿ ಬೆಳಗಿದ ಹಣತೆಗಳು ನೂರಾರು ಹೃದಯಗಳಲ್ಲಿ ಪ್ರೀತಿಯ ಬೆಳಕನ್ನು ಹರಡಿದವು. ಮಾನವೀಯತೆಯ ಮೌಲ್ಯಗಳನ್ನು ಎತ್ತಿಹಿಡಿದ ‘ಕರುಣೆಯ ಬೆಳಕು’ ಕಾರ್ಯಕ್ರಮವು ದೀಪಾವಳಿಯ ನಿಜವಾದ ಆಶಯವನ್ನು ಸಾಕಾರಗೊಳಿಸಿ, ಸಮಾಜಕ್ಕೆ ಪ್ರೀತಿ, ಕಾಳಜಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಾರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!