ಶಕ್ತಿನಗರ ನ 09 : ಹಿಂದೂ ಸಂಸ್ಕೃತಿಯಲ್ಲಿ ಗೋಮಾತೆಗೆ ಪವಿತ್ರ ಹಾಗೂ ವಿಶಿಷ್ಟ ಸ್ಥಾನವಿದ್ದು, ಗೋಸೇವೆಯನ್ನು ಪುಣ್ಯದ ಕಾರ್ಯವೆಂದು ಪರಿಗಣಿಸಲಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇದರ ಜಂಟಿ ಆಶ್ರಯದಲ್ಲಿ ನವೆಂಬರ್ 9ರಂದು ಘಟಕದ ಸದಸ್ಯರಾದ ವಾಣಿ ಅವರ ಮನೆಯಲ್ಲಿ ಗೋಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನಡೆಸಲಾಯಿತು.

ಈ ಸಂದರ್ಭದಲ್ಲಿ ಗೋವಿನ ದೈನಂದಿನ ಆಹಾರಕ್ಕಾಗಿ 50 ಕೆ.ಜಿ. ಹಿಂಡಿಯನ್ನು ನೀಡಿ ಗೋಸೇವಾ ಕಾರ್ಯಕ್ಕೆ ಕೈಜೋಡಿಸಲಾಯಿತು.
ಸುಮಾರು 47 ವರ್ಷಗಳಿಂದ ನಿರಂತರವಾಗಿ ಗೋಮಾತೆಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾವಿತ್ರಿಯವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಅವರ ಸೇವಾ ಮನೋಭಾವಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ತೇಜಸ್ ವಿ. ಪೂಜಾರಿ, ಘಟಕದ ಮಾಜಿ ಅಧ್ಯಕ್ಷರು ಹಾಗೂ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಗಣೇಶ್ ಕೆ. ಮಹಾಕಾಳಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇದರ ಅಧ್ಯಕ್ಷರಾದ ತುಕಾರಾಂ ಪೂಜಾರಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.), ಕುಂಟಲ್ಪಾಡಿ ಇದರ ಕಾರ್ಯದರ್ಶಿಗಳಾದ ಭವಾನಿ ಗಣೇಶ್ ವಂದಿಸಿದರು.







