Yuvavahini

NOV 10, 2026 8.00 PM IST

ಯುವವಾಹಿನಿ ಮಂಗಳೂರು ಘಟಕ

ಅಂಧಕಾರದಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ – ಅರ್ಥಪೂರ್ಣ ದೀಪಾವಳಿ ಆಚರಣೆ

ಮಂಗಳೂರು ನ 10 : ಅಂಧಕಾರವನ್ನು ದೂರಮಾಡಿ ಬೆಳಕನ್ನು ಪಸರಿಸುವ ದೀಪಾವಳಿ ಹಬ್ಬವನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನವೆಂಬರ್ 10ರಂದು ಘಟಕದ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಯುವವಾಹಿನಿ ಮಂಗಳೂರು ಘಟಕದ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾದ ಗೋಪಾಲ ಪೂಜಾರಿ ಅವರು ಗುರುಪೂಜೆಯನ್ನು ನೆರವೇರಿಸಿದರು. ಅಂದಿನ ಗುರುಪೂಜೆಯ ಸೇವೆ ಹಾಗೂ ಉಪಾಹಾರದ ವ್ಯವಸ್ಥೆಯನ್ನು ಘಟಕದ ಸದಸ್ಯರಾದ ರಾಜೇಂದ್ರ ಚಿಲಿಂಬಿ ವಹಿಸಿಕೊಂಡಿದ್ದರು.

ಸಂಜೆ 7 ಗಂಟೆಗೆ ಗುರು ಪ್ರಾರ್ಥನೆಯೊಂದಿಗೆ ಘಟಕದ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಅಧ್ಯಕ್ಷರು ಸರ್ವ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯದರ್ಶಿ ಉಷಾ ಅವರು ಹಿಂದಿನ ಸಭೆಯ ವರದಿಯನ್ನು ವಾಚಿಸಿ ಅನುಮೋದನೆ ಪಡೆದರು. ಸಂಜೆ 7.30ಕ್ಕೆ ಅಧ್ಯಕ್ಷರ ನೇತೃತ್ವದಲ್ಲಿ ದೀಪಾವಳಿ ಆಚರಣೆ ನಡೆಯಿತು. ಪ್ರತಿಯೊಬ್ಬ ಸದಸ್ಯರೂ ಒಂದೊಂದು ಮಣ್ಣಿನ ಹಣತೆಯನ್ನು ಬೆಳಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಚಾಲನೆ ನೀಡಿದರು. ಸರಳತೆಯೊಂದಿಗೆ ಪರಿಸರ ಕಾಳಜಿ ಮತ್ತು ಸಂಸ್ಕೃತಿಯ ಮೌಲ್ಯಗಳನ್ನು ಸಾರುವ ಈ ಆಚರಣೆ ವಿಶೇಷ ಮೆರುಗು ನೀಡಿತು.

ಅಂಧಕಾರದಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ ಸಾಗುವ ಸಂದೇಶ ಸಾರುವ ದೀಪಾವಳಿ ಎಲ್ಲರ ಬದುಕಿನಲ್ಲಿ ಸಂತೋಷ, ಆರೋಗ್ಯ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಯುವವಾಹಿನಿ ಕುಟುಂಬದ ಒಗ್ಗಟ್ಟು ಹಾಗೂ ಸೇವಾ ಮನೋಭಾವ ದೀಪದ ಬೆಳಕಿನಂತೆ ಸದಾ ಪ್ರಜ್ವಲಿಸುತ್ತಿರಲಿ ಎಂದು ಹಾರೈಸಲಾಯಿತು. ನಂತರ ಸದಸ್ಯರು ಪರಸ್ಪರ ಸಿಹಿ ಹಂಚಿಕೊಂಡು ದೀಪಾವಳಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕೊನೆಯಲ್ಲಿ ಘಟಕದ ಕೋಶಾಧಿಕಾರಿ ಚಂದ್ರಶೇಖರ್ ಕಿನ್ನಿಗೋಳಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!