Yuvavahini

NOV 11, 2026 9.00 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಕುಟುಂಬದ ಬಾಂಧವ್ಯ ಬೆಸೆಯುವ ಸಂಭ್ರಮದ ದೀಪಾವಳಿ ಆಚರಣೆ

ಕೊಲ್ಯ ನ 11 : ಕತ್ತಲೆಯನ್ನು ದೂರಮಾಡಿ ಬೆಳಕನ್ನು ಪಸರಿಸುವ ದೀಪಾವಳಿ ಹಬ್ಬವು ಸಂತೋಷ, ಸಂಭ್ರಮ ಹಾಗೂ ಸೌಹಾರ್ದತೆಯ ಸಂಕೇತವಾಗಿದೆ. ಕುಟುಂಬದ ಸದಸ್ಯರೆಲ್ಲರೂ ಒಂದೆಡೆ ಸೇರಿ ಹಬ್ಬವನ್ನು ಆಚರಿಸುವುದರಿಂದ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ.

ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ‘ದೀಪಾವಳಿ ಸಂಭ್ರಮ’ ಕಾರ್ಯಕ್ರಮವು ದಿನಾಂಕ 11.11.2026ರ ಬುಧವಾರದಂದು ಕನೀರುತೋಟದ ಸಮನ್ವಿ ಫಾರ್ಮ್ ಹೌಸ್‌ನಲ್ಲಿ ಸಡಗರ ಹಾಗೂ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಸದಸ್ಯರೆಲ್ಲರೂ ಹಣತೆಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು ಸವಿದು ಪರಸ್ಪರ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಘಟಕದ ಅಧ್ಯಕ್ಷರಾದ ಜೀವನ್ ಕೊಲ್ಯ ಅವರು ಸರ್ವರನ್ನು ಸ್ವಾಗತಿಸಿ, ದೀಪಾವಳಿ ಹಬ್ಬದ ಮಹತ್ವ ಹಾಗೂ ಯುವವಾಹಿನಿ ಕುಟುಂಬವಾಗಿ ಒಗ್ಗೂಡಿ ಹಬ್ಬ ಆಚರಿಸುವ ಉದ್ದೇಶವನ್ನು ವಿವರಿಸಿದರು. “ಎಲ್ಲಾ ಸದಸ್ಯರೂ ಒಂದೇ ಮನೆಯ ಕುಟುಂಬದ ಸದಸ್ಯರಿದ್ದಂತೆ. ಎಲ್ಲರೂ ಒಟ್ಟಾಗಿ ಸೇರಿ ಹಬ್ಬ ಆಚರಿಸುವುದರಿಂದ ಸಂಭ್ರಮ ಹೆಚ್ಚುವುದರ ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯವೂ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

ಘಟಕದ ಪ್ರಚಾರ ನಿರ್ದೇಶಕರಾದ ನಂದನ್ ಕುಂಪಲ ಅವರು ಸದಸ್ಯರಿಗಾಗಿ ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಿದರು. ಸದಸ್ಯರು ಹಾಡು, ನೃತ್ಯ ಹಾಗೂ ಹಾಸ್ಯಮಯ ಚಟುವಟಿಕೆಗಳ ಮೂಲಕ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.

ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಮುಕೇಶ್ ಕಿನ್ಯ, ಪ್ರಥಮ ಉಪಾಧ್ಯಕ್ಷ ಜೀವನ್ ಬೆರಿಕೆ, ದ್ವಿತೀಯ ಉಪಾಧ್ಯಕ್ಷ ಲತೀಶ್ ಪಾಪುದಡಿ, ಕೋಶಾಧಿಕಾರಿ ಅನಿತಾ ಸುಂದರ್, ಕೇಂದ್ರ ಸಮಿತಿ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಕೇಂದ್ರ ಸಮಿತಿ ಆಂತರಿಕ ಲೆಕ್ಕಪತ್ರ ಪರಿಶೋಧನಾ ನಿರ್ದೇಶಕ ಸುಂದರ್ ಸುವರ್ಣ, ಕೇಂದ್ರ ಸಮಿತಿ ಯುವ ಸಿಂಚನ ಸಂಪಾದಕ ಮಂಡಳಿ ಸದಸ್ಯ ಲತೀಶ್ ಸಂಕೋಳಿಗೆ, ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ, ಮಾಜಿ ಅಧ್ಯಕ್ಷರಾದ ಕುಸುಮಾಕರ್ ಕುಂಪಲ, ಆನಂದ್ ಮಲಯಾಳಕೋಡಿ, ಮೋಹನ್ ಮಾಡೂರು ಸೇರಿದಂತೆ ಘಟಕದ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಉಪಸ್ಥಿತರಿದ್ದರು.

ಹಬ್ಬವೆಂದರೆ ಕೇವಲ ಸಂಪ್ರದಾಯದ ಆಚರಣೆಯಲ್ಲ, ಅದು ಸಂಬಂಧಗಳನ್ನು ಬೆಸೆಯುವ ಸುಂದರ ಸೇತುವೆ. ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯನ್ನು ಹಂಚಿಕೊಂಡು ಕುಟುಂಬದಂತೆ ಒಂದಾಗಿ ದೀಪಾವಳಿ ಆಚರಿಸುವ ಮೂಲಕ ಕೊಲ್ಯ ಘಟಕವು ಹಬ್ಬದ ನಿಜವಾದ ಆಶಯವನ್ನು ಅರ್ಥಪೂರ್ಣವಾಗಿ ಸಾಕಾರಗೊಳಿಸಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!