Yuvavahini

NOV 08, 2026 8.00 PM IST

ಯುವವಾಹಿನಿ (ರಿ.) ಬಜಪೆ ಘಟಕ

‘ಸಿನಿದನಿ’ ಕಿರುಚಿತ್ರ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ – ಕಲಾವಿದರಿಗೆ ಗೌರವಾರ್ಪಣೆ

ಬಜಪೆ ನ 08 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ – 2026ರ ಅಂಗವಾಗಿ ಆಯೋಜಿಸಲಾದ ‘ಸಿನಿದನಿ’ ಕಿರುಚಿತ್ರ ಸ್ಪರ್ಧೆಯಲ್ಲಿ ಬಜಪೆ ಘಟಕವು ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಘಟಕದ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಸಂಕಲನಕಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಭವಿತ್ ಪೋರ್ಕೊಡಿ ಹಾಗೂ ದ್ವಿತೀಯ ಬಹುಮಾನ ಗಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ನಿರ್ದೇಶಕ ನಿತೇಶ್ ಪೂಜಾರಿ, ಭವಿತ್ ಪೋರ್ಕೊಡಿ ಸೇರಿದಂತೆ ಕಿರುಚಿತ್ರದಲ್ಲಿ ಅಭಿನಯಿಸಿದ ಎಲ್ಲಾ ಕಲಾವಿದರನ್ನು ದಿನಾಂಕ 08.11.2026ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಿರುಚಿತ್ರದಲ್ಲಿ ಭಾಗವಹಿಸಿದ ಸದಸ್ಯರು ತಮ್ಮ ಅನುಭವ ಹಾಗೂ ಅನಿಸಿಕೆಗಳನ್ನು ಹಂಚಿಕೊಂಡರು. ಕಲಾವಿದರ ಪರಿಶ್ರಮ, ತಂಡದ ಒಗ್ಗಟ್ಟು ಹಾಗೂ ಸೃಜನಶೀಲ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಘಟಕದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಲಾವಿದರನ್ನು ಅಭಿನಂದಿಸಿದರು. ಸಾಮೂಹಿಕ ಪ್ರಯತ್ನ, ಸೃಜನಶೀಲತೆ ಮತ್ತು ಕಲಾಸಕ್ತಿಯ ಮೂಲಕ ಸಾಧಿಸಿದ ಈ ಯಶಸ್ಸು ಘಟಕದ ಸದಸ್ಯರಲ್ಲಿ ಹೊಸ ಉತ್ಸಾಹ ಹಾಗೂ ಸ್ಫೂರ್ತಿಯನ್ನು ಮೂಡಿಸಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!