ನಾರಾಯಣ ಗುರು ಮಂದಿರದಲ್ಲಿ ದೀಪಾವಳಿ ಆಚರಣೆ – ನೂರಕ್ಕೂ ಅಧಿಕ ಮಂದಿ ಭಾಗಿ
ಶಕ್ತಿನಗರ ನ 12 : ಕತ್ತಲೆಯ ಮೇಲೆ ಬೆಳಕಿನ, ಕೆಟ್ಟದರ ಮೇಲೆ ಒಳ್ಳೆಯದರ ಹಾಗೂ ಅಜ್ಞಾನದ ಮೇಲೆ ಜ್ಞಾನದ ವಿಜಯದ ಸಂಕೇತವಾದ ದೀಪಾವಳಿ ಹಬ್ಬವನ್ನು ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇದರ ಸಹಭಾಗಿತ್ವದಲ್ಲಿ ದಿನಾಂಕ 12-11-2026ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.
ಕಾರ್ಯಕ್ರಮದ ಆರಂಭದಲ್ಲಿ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ತೇಜಸ್ ವಿ. ಪೂಜಾರಿ ಅವರು ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ನಂತರ ಮಂದಿರದ ಸುತ್ತಮುತ್ತ ದೀಪಗಳನ್ನು ಬೆಳಗಿಸಿ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪಾವಳಿಯ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಭಾಗವಹಿಸಿದ ಎಲ್ಲರಿಗೂ ಸಿಹಿ ಹಂಚಿ ಹಬ್ಬದ ಸಂತೋಷವನ್ನು ಹಂಚಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರ ವತಿಯಿಂದ ಮಂದಿರದಲ್ಲಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಧಾರ್ಮಿಕ ಶ್ರದ್ಧೆ, ಸೌಹಾರ್ದತೆ ಹಾಗೂ ಸಂಘಟನಾ ಒಗ್ಗಟ್ಟಿನೊಂದಿಗೆ ನಡೆದ ಈ ದೀಪಾವಳಿ ಆಚರಣೆಯು ಎಲ್ಲರಲ್ಲೂ ಸಂತಸ ಮೂಡಿಸಿತು. ಕಾರ್ಯಕ್ರಮದ ಕೊನೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇದರ ಕಾರ್ಯದರ್ಶಿ ಭವಾನಿ ಗಣೇಶ್ ಅವರು ಧನ್ಯವಾದ ಸಮರ್ಪಿಸಿದರು.







