Yuvavahini

NOV 11, 2026 1.00 PM IST

ಯುವವಾಹಿನಿ ಕೊಲ್ಯ ಘಟಕ

ಡ್ರಗ್ಸ್ ಮತ್ತು ಮೊಬೈಲ್ ವ್ಯಸನದಿಂದ ದೂರವಿದ್ದು ಆರೋಗ್ಯಪೂರ್ಣ ಬದುಕು ರೂಪಿಸಿಕೊಳ್ಳಿ – ವಿದ್ಯಾರ್ಥಿಗಳಿಗೆ ಜಾಗೃತಿ

150 ವಿದ್ಯಾರ್ಥಿಗಳು ಮಾಹಿತಿ ಶಿಬಿರದ ಪ್ರಯೋಜನ ಪಡೆದರು

ಉಳ್ಳಾಲ ನ 11 : ಆಧುನಿಕ ತಂತ್ರಜ್ಞಾನದ ಅತಿಯಾದ ಬಳಕೆ ಮತ್ತು ಮಾದಕ ವಸ್ತುಗಳ ವ್ಯಸನವು ಯುವಜನತೆಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಮೇಲೆ ನಿಯಂತ್ರಣ ಹೊಂದುವುದರ ಜೊತೆಗೆ ಮಾದಕ ವಸ್ತುಗಳ ಆಕರ್ಷಣೆ ಮತ್ತು ದುಷ್ಪರಿಣಾಮಗಳ ಬಗ್ಗೆ ಜಾಗೃತರಾಗಿರುವುದು ಇಂದಿನ ಅಗತ್ಯವಾಗಿದೆ.

ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 11-11-2026ರಂದು ಉಳ್ಳಾಲದ ಪಾಂಡ್ಯರಾಜ್ ಬಲ್ಲಾಳ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಡ್ರಗ್ಸ್ ಹಾಗೂ ಮೊಬೈಲ್ ಅಡಿಕ್ಷನ್ ಕುರಿತ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಲ್ಯ ಘಟಕದ ಅಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮೊಬೈಲ್ ಮತ್ತು ಮಾದಕ ವಸ್ತುಗಳ ವ್ಯಸನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊಬೈಲ್ ಬಳಕೆಯಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ಡ್ರಗ್ಸ್ ಜಾಲಕ್ಕೆ ಸಿಲುಕುವುದರಿಂದ ವ್ಯಕ್ತಿ ಹಾಗೂ ಕುಟುಂಬ ಅನುಭವಿಸುವ ಸಂಕಷ್ಟ, ಸಾಮಾಜಿಕ ತಿರಸ್ಕಾರ ಮತ್ತು ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸ್ಪರ್ಶ ಕೌನ್ಸಿಲಿಂಗ್ ಕೇಂದ್ರದ ಆಪ್ತ ಸಮಾಲೋಚಕಿ ಡಾ. ವಿದ್ಯಾ ಅವರು ಮೊಬೈಲ್‌ನ ಅತಿಯಾದ ಬಳಕೆಯಿಂದ ದೇಹ ಮತ್ತು ಮನಸ್ಸಿನ ಮೇಲೆ ಉಂಟಾಗುವ ದುಷ್ಪರಿಣಾಮಗಳು, ಮೊಬೈಲ್‌ನಿಂದ ದೂರವಿದ್ದು ಕ್ರೀಡೆ, ಓದು ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿಧಾನಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಡ್ರಗ್ಸ್ ಬಳಕೆಯಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳು, ಮಾದಕ ವಸ್ತುಗಳ ಜಾಲದಿಂದ ದೂರವಿರಲು ವಿದ್ಯಾರ್ಥಿಗಳು ವಹಿಸಬೇಕಾದ ಎಚ್ಚರಿಕೆ ಮತ್ತು ವ್ಯಸನಗಳಿಂದ ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳನ್ನು ಮನಮುಟ್ಟುವಂತೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಯೊಂದಿಗೆ ಮುಕ್ತವಾಗಿ ಸಂವಾದ ನಡೆಸಿ ತಮ್ಮಲ್ಲಿದ್ದ ವಿವಿಧ ಪ್ರಶ್ನೆ ಹಾಗೂ ಸಂಶಯಗಳಿಗೆ ಉತ್ತರ ಪಡೆದುಕೊಂಡರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಇಂತಹ ಉಪಯುಕ್ತ ಜಾಗೃತಿ ಕಾರ್ಯಕ್ರಮ ಆಯೋಜಿಸಿದ ಯುವವಾಹಿನಿ ಕೊಲ್ಯ ಘಟಕದ ಕಾರ್ಯವನ್ನು ಶ್ಲಾಘಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಶರ್ಮಿಳಾ ಹಾಗೂ ಉಪಪ್ರಾಂಶುಪಾಲರಾದ ರಶ್ಮಿ ಚೌಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಕೊಲ್ಯ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸವಿತಾ ಬಂಗೇರ ಕಾರ್ಯಕ್ರಮವನ್ನು ಸಂಯೋಜಿಸಿದರು. ಸುಮಾರು 150 ವಿದ್ಯಾರ್ಥಿಗಳು ಭಾಗವಹಿಸಿದ ಈ ಮಾಹಿತಿ ಶಿಬಿರವು ಮೊಬೈಲ್ ಅತಿಬಳಕೆ ಹಾಗೂ ಮಾದಕ ವಸ್ತುಗಳ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!