Yuvavahini

NOV 13, 2026 9.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 86

ಅಜ್ಞಾನದ ಕತ್ತಲೆಯನ್ನು ಜ್ಞಾನದ ಬೆಳಕಿನಿಂದ ದೂರಮಾಡಿ, ಸಮಾನತೆಯ ಸಮಾಜವನ್ನು ನಿರ್ಮಿಸುವುದೇ ನಾರಾಯಣ ಗುರುಗಳ ಆಶಯ – ಲೋಹಿತ್ ಕನಪಾದೆ

ಕೊಡಂಬೆಟ್ಟು ನ 13 : ಅಜ್ಞಾನದ ಕತ್ತಲೆಯನ್ನು ಜ್ಞಾನದ ಬೆಳಕಿನಿಂದ ದೂರಮಾಡಿ, ಜಾತಿ-ಮತಗಳ ಭೇದಭಾವವಿಲ್ಲದ ಸಮಾನತೆಯ ಸಮಾಜವನ್ನು ನಿರ್ಮಿಸುವುದೇ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯವಾಗಿತ್ತು. ಗುರುಗಳ ತತ್ವಾದರ್ಶಗಳು ಕೇವಲ ಉಪದೇಶಗಳಿಗೆ ಸೀಮಿತವಾಗದೆ, ನಮ್ಮ ಬದುಕಿನ ನಡವಳಿಕೆ ಮತ್ತು ಸಾಮಾಜಿಕ ಚಿಂತನೆಗಳಲ್ಲಿ ಪ್ರತಿಫಲಿಸಬೇಕು ಎಂದು ಆಳ್ವಾಸ್ ಕಾಲೇಜಿನ ಮನೋರೋಗ ವಿಭಾಗದ ಆಪ್ತ ಸಮಾಲೋಚಕರಾದ ಲೋಹಿತ್ ಕನಪಾದೆ ಹೇಳಿದರು.

ಅವರು ನವೆಂಬರ್ 13ರಂದು ಅಲೆಪ್ಪಾಡಿ ಕೊಡಂಬೆಟ್ಟು ಗ್ರಾಮದ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ – 86 ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು.

ಮನುಷ್ಯನ ಬದುಕಿನಲ್ಲಿ ಜ್ಞಾನ, ವಿವೇಕ ಮತ್ತು ಮಾನವೀಯ ಮೌಲ್ಯಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ. ಪರಸ್ಪರ ಗೌರವ, ಪ್ರೀತಿ, ಸಹಬಾಳ್ವೆ ಹಾಗೂ ಸಮಾನತೆಯ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಾಧ್ಯ. ನಾರಾಯಣ ಗುರುಗಳ ವಿಚಾರಧಾರೆಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ ಎಂಬ ಆಶಯವನ್ನು ಅವರು ತಮ್ಮ ಸಂದೇಶದಲ್ಲಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ , ನಿರ್ದೇಶಕರಾದ ನವೀನ್ ಕುಡ್ಮೇರು, ಸಂಘಟನಾ ಕಾರ್ಯದರ್ಶಿ ಸರಿತಾ ಮೂರ್ಜೆ , ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ ಯತೀಶ್ ಬೊಳ್ಳಾಯಿ , ನಾರಾಯಣ ಪಲ್ಲಿಕಂಡ ಲಿತೀಶ್ ವಾಮದಪದವು , ಸದಾನಂದ ವಾಮದ ಪದವು , ತ್ರಿವೇಣಿ ಮೂರ್ಜೆ , ಸೌಮ್ಯ ಪೂಂಜಾಲಕಟ್ಟೆ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶಿವಾನಂದ ಎಂ , ನಾಗೇಶ್ ಪೊನ್ನೋಡಿ ಭಾಗವಹಿಸಿದ್ದರು. ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ , ವಿಜೀತ್ ಕೋಟೆಕಣಿ ಸಂಗೀತ ಸೇವೆ ನೀಡಿದರು.
ಆತಿಥ್ಯ ವಹಿಸಿದ ರಾಮಾಂಜನೇಯ ಭಜನಾ ಮಂದಿರದ ಗೌರವಾಧ್ಯಕ್ಷರಾದ ಚೇತನ್ ಪೂಜಾರಿ ಕೃತಜ್ಞತೆ ಸಲ್ಲಿಸಿದರು. ಭಜನಾ ಮಂದಿರದ ಅಧ್ಯಕ್ಷರಾದ ಕಿರಣ್ ಕೋಟ್ಯಾನ್ ಉಪಸ್ಥಿತರಿದ್ದರು
ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಅಧ್ಯಕ್ಷರಾದ ಕಿರಣ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!