ಬೆಂಗಳೂರು, ನ. 17: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನವೆಂಬರ್ ತಿಂಗಳ ಕಾರ್ಯಕಾರಿ ಸಮಿತಿ ಸಭೆಯು ನವೆಂಬರ್ 17ರಂದು ಬೆಂಗಳೂರಿನ ಕಬ್ಬನ್ ಪಾರ್ಕ್‌ನ ಸಚಿವಾಲಯ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಯುವವಾಹಿನಿ ಸಂಸ್ಥೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಯು ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ಹೊಸ ಮೈಲಿಗಲ್ಲಾಗಿ ಗುರುತಿಸಿಕೊಂಡಿತು.
ಸಭೆಯಲ್ಲಿ ಕೇಂದ್ರ ಸಮಿತಿಯ 27 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳು ಹಾಗೂ ವಿವಿಧ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅವರು ಸಭೆಯ ಆತಿಥ್ಯ ವಹಿಸಿ, ಬೆಂಗಳೂರಿನಲ್ಲಿ ಸಭೆಯನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ರಾಜಧಾನಿಯಲ್ಲಿ ನಡೆದ ಈ ಐತಿಹಾಸಿಕ ಸಭೆಯು ಯುವವಾಹಿನಿಯ ಸಂಘಟನಾ ಶಕ್ತಿ, ಸದಸ್ಯರ ಬದ್ಧತೆ ಹಾಗೂ ಸಂಸ್ಥೆಯ ವ್ಯಾಪಕ ಬೆಳವಣಿಗೆಗೆ ಸಾಕ್ಷಿಯಾಯಿತು.





