Yuvavahini

NOV 15, 2026 6.00 PM IST

ಬೆಂಗಳೂರಿನಲ್ಲಿ ಮನಸೂರೆಗೊಂಡ ಜಂಟಿ ಸಭೆ

ಮಾಜಿ ಅಧ್ಯಕ್ಷರ ಮಾರ್ಗದರ್ಶನ, ಹಿರಿಯರ ಅನುಭವದ ಅನಾವರಣ

ಬೆಂಗಳೂರು, ನ. 17: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಹಾಗೂ ಬೆಂಗಳೂರು ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಜಂಟಿ ಸಭೆಯು ಬೆಂಗಳೂರಿನ ಕಬ್ಬನ್ ಪಾರ್ಕ್‌ನ ಸಚಿವಾಲಯ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಯುವವಾಹಿನಿ ಬೆಂಗಳೂರು ಘಟಕದ ಸಂಘಟನಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ಮಹತ್ವ ಪಡೆದ ಈ ಸಭೆಯಲ್ಲಿ ಕೇಂದ್ರ ಸಮಿತಿಯ 14 ಮಂದಿ ಮಾಜಿ ಅಧ್ಯಕ್ಷರುಗಳು ಗೌರವ ಆಹ್ವಾನಿತರಾಗಿ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು.

500ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಬೆಂಗಳೂರು ಘಟಕದ ಮುಂದಿನ ಕಾರ್ಯಯೋಜನೆಗಳು, ಸಂಘಟನೆಯ ಬಲವರ್ಧನೆ, ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ವಿವಿಧ ಸಂಘಟನಾತ್ಮಕ ವಿಚಾರಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.

ಸಂಸ್ಥೆಯ ಹಿರಿಯರ ಅನುಭವ, ಕಿರಿಯರ ಉತ್ಸಾಹ ಹಾಗೂ ಸಂಘಟನೆಯ ಮೇಲಿನ ಅಭಿಮಾನ ಒಂದೇ ವೇದಿಕೆಯಲ್ಲಿ ಮೇಳೈಸಿದ ಈ ಸಭೆಯಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು ತಮ್ಮ ಅಮೂಲ್ಯ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನವನ್ನು ನೀಡಿದರು.

ಹಿರಿಯರ ಅನುಭವದ ನುಡಿಗಳು, ಸಂಘಟನೆಯ ಬಗೆಗಿನ ಕಾಳಜಿ ಮತ್ತು ಭವಿಷ್ಯದ ಕನಸುಗಳು ಸಭೆಗೆ ವಿಶೇಷ ಮೆರುಗು ನೀಡಿದವು. ಎಲ್ಲರ ಸಹಕಾರ, ಸಹಭಾಗಿತ್ವ ಹಾಗೂ ಮಾರ್ಗದರ್ಶನದೊಂದಿಗೆ ಸಭೆಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ ಭವಿಷ್ಯದ ಸಂಘಟನಾತ್ಮಕ ಪಯಣಕ್ಕೆ ಹೊಸ ಚೈತನ್ಯ ತುಂಬಿದ ಈ ಜಂಟಿ ಸಭೆಯು ಬೆಂಗಳೂರಿನಲ್ಲಿ ಸ್ಮರಣೀಯ ಕ್ಷಣವಾಗಿ ಮೂಡಿಬಂತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!