Yuvavahini

NOV 19, 2026 8.59 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 87

ಭೇದಭಾವದ ಗೋಡೆ ಕೆಡವಿ, ಮಾನವೀಯತೆಯ ಬೆಳಕು ಚೆಲ್ಲಿದ ನಾರಾಯಣಗುರು

ಕಾರಾಜೆ ನ19 : ಭಗವಂತನು ಸೃಷ್ಟಿಸಿದ ಗಾಳಿ, ನೀರು, ಬೆಳಕುಗಳಿಗೆ ಜಾತಿ, ಧರ್ಮ, ವರ್ಣಗಳ ಭೇದವಿಲ್ಲ. ಅವು ಪ್ರಕೃತಿಯ ಎಲ್ಲ ಮಕ್ಕಳಿಗೂ ಸಮಾನವಾಗಿ ದೊರೆಯುತ್ತವೆ. ಹಾಗಿರುವಾಗ ದೇವರ ಸೃಷ್ಟಿಯಾದ ಮನುಷ್ಯರ ನಡುವೆ ಜಾತಿ, ಮತ, ಮೇಲು–ಕೀಳು, ಅಸ್ಪೃಶ್ಯತೆಯ ಗೋಡೆಗಳೇಕೆ? ಎಂಬ ಮೂಲಭೂತ ಪ್ರಶ್ನೆಯನ್ನು ಸಮಾಜದ ಮುಂದಿಟ್ಟವರು ಬ್ರಹ್ಮಶ್ರೀ ನಾರಾಯಣಗುರುಗಳು.

ಭಾರತವೆಂಬುದು ಕೇವಲ ಭೌಗೋಳಿಕ ಪ್ರದೇಶವಲ್ಲ; ಅದು ಜ್ಞಾನದ ಭೂಮಿ, ಆಧ್ಯಾತ್ಮದ ನೆಲೆ, ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸಂಸ್ಕೃತಿಯ ತೊಟ್ಟಿಲು. ಸರ್ವಧರ್ಮಗಳನ್ನೂ ಗೌರವಿಸಿ, ಎಲ್ಲ ಧರ್ಮಗಳ ಸಾರದಲ್ಲಿರುವ ಮಾನವೀಯ ಮೌಲ್ಯಗಳನ್ನು ಪ್ರೀತಿಸುವ ವಿಶಾಲ ಮನೋಭಾವ ನಮ್ಮ ದೇಶದ ಸಂಸ್ಕೃತಿಯ ಹೆಗ್ಗಳಿಕೆ. ಇಂತಹ ಪುಣ್ಯಭೂಮಿಯಲ್ಲಿ ಮನುಷ್ಯರ ನಡುವೆ ಜಾತಿ–ಧರ್ಮದ ಹೆಸರಿನಲ್ಲಿ ತಾರತಮ್ಯ, ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಗಳು ಬೇರೂರಿದ್ದ ಕಾಲಘಟ್ಟದಲ್ಲಿ ನಾರಾಯಣಗುರುಗಳು ಹೊಸ ಸಾಮಾಜಿಕ ಜಾಗೃತಿಯ ಬೆಳಕಾಗಿ ಉದಯಿಸಿದರು ಎಂದು ಭಜಕರು, ಆಧ್ಯಾತ್ಮಿಕ ಚಿಂತಕರಾದ ರವಿ ಮಂಜನಾಡಿ ತಿಳಿಸಿದರು

ಅವರು ನವೆಂಬರ್ 19 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಪುರುಷೋತ್ತಮ ಪೂಜಾರಿ ಕಾರಾಜೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 87 ರಲ್ಲಿ ಗುರುಸಂದೇಶ ನೀಡಿದರು

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ದ್ವಿತೀಯ ಉಪಾಧ್ಯಕ್ಷರಾದ ಹರೀಶ್ ಅಜೆಕಲ, ಕೋಶಾಧಿಕಾರಿ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ನವೀನ್ ಕಾರಾಜೆ, ಶೈಲೇಶ್ ಕುಚ್ಚಿ ಗುಡ್ಡೆ ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪೂಜಾರಿ ಪಲ್ಲಿಕಂಡ, ಪ್ರಶಾಂತ್ ಪೂಜಾರಿ ಬೊಳ್ಳಾಯಿ , ಭವಾನಿ ಕೆ, ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶಿವಾನಂದ ಎಂ, ನಾಗೇಶ್ ಪೊನ್ನೋಡಿ, ರಾಜೇಶ್ ಸುವರ್ಣ, ಜಗದೀಶ್ ಕಾರಾಜೆ, ಅರುಣ್ ಕುಮಾರ್, ಭವ್ಯ ಪ್ರಜೀತ್ ಭಾಗವಹಿಸಿದ್ದರು. ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ ಸಂಗೀತ ಸೇವೆ ನೀಡಿದರು.
ಆತಿಥ್ಯ ವಹಿಸಿದ ಪುರುಪೋತ್ತಮ ಪೂಜಾರಿ ಕಾರಾಜೆ ಇವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಅಧ್ಯಕ್ಷರಾದ ಕಿರಣ್ ಪೂಂಜರಕೊಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!