Yuvavahini

NOV 19, 2026 11.00 AM IST

ಯುವವಾಹಿನಿ (ರಿ) ಮೂಡುಬಿದಿರೆ ಘಟಕ

ಉಚಿತ ಪ್ರಕೃತಿ ಚಿಕಿತ್ಸಾ ಆರೋಗ್ಯ ಶಿಬಿರ

65ಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ

ಮೂಡುಬಿದಿರೆ ನ 19 : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಳ್ವಾಸ್ ಆನಂದಮಯ ಆರೋಗ್ಯಧಾಮ ಇವರ ಸಹಯೋಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಆರೋಗ್ಯ ಶಿಬಿರವು ನವೆಂಬರ್ 19ರಂದು ಗುರುವಾರ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.

ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ನಡೆದ ಶಿಬಿರದಲ್ಲಿ ಸುಮಾರು 65 ಮಂದಿ ಭಾಗವಹಿಸಿ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಂಡರು.

ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಹಾಗೂ ಆಳ್ವಾಸ್ ಆನಂದಮಯ ಆರೋಗ್ಯಧಾಮದ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ವನಿತಾ ಎಸ್. ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರಕೃತಿ ಚಿಕಿತ್ಸೆ, ಆರೋಗ್ಯ ಸಂರಕ್ಷಣೆ ಹಾಗೂ ಯೋಗ ವಿಜ್ಞಾನದ ಮಹತ್ವವನ್ನು ವಿವರಿಸಿದರು. ಇಂತಹ ಶಿಬಿರಗಳ ಮೂಲಕ ದೊರೆಯುವ ಆರೋಗ್ಯ ಸೇವೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಕರೆ ನೀಡಿದರು.

ಘಟಕದ ಆರೋಗ್ಯ ನಿರ್ದೇಶಕರಾದ ಡಾ. ಶುಭಕರ್ ಅಂಚನ್ ಮಾತನಾಡಿ, ಇಂದಿನ ಜೀವನಶೈಲಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನವು ಆರೋಗ್ಯಕರ ಜೀವನಕ್ಕೆ ಪೂರಕವಾಗಿವೆ ಎಂದು ತಿಳಿಸಿ, ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಗಿರೀಶ್ ಕೋಟ್ಯಾನ್ ಮಾರೂರು ಅವರು ಮಾತನಾಡಿ, ಕಳೆದ ಹಲವು ವರ್ಷಗಳಿಂದ ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ತಮ್ಮ ಜೀವನಶೈಲಿಯಲ್ಲಿ ಅಳವಡಿಸಿಕೊಂಡಿರುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಿದೆ ಎಂದು ತಮ್ಮ ಅನುಭವ ಹಂಚಿಕೊಂಡರು. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿಯೂ ಘಟಕದ ವತಿಯಿಂದ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ವೇದಿಕೆಯಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ್ ಕೆ. ಶೆಣೈ ಉಪಸ್ಥಿತರಿದ್ದರು.

ಶಿಬಿರದಲ್ಲಿ ಅಕ್ಯುಪಂಕ್ಚರ್, ಅಕ್ಯುಪ್ರೆಶರ್, ವೈಯಕ್ತಿಕ ಆಹಾರ ಪದ್ಧತಿಯ ಕುರಿತು ಮಾರ್ಗದರ್ಶನ ಹಾಗೂ ಯೋಗಾಭ್ಯಾಸದ ಸಲಹೆಗಳನ್ನು ನೀಡಲಾಯಿತು. ಪ್ರಕೃತಿಸಹಜ ಆರೋಗ್ಯ ಪದ್ಧತಿಗಳ ಕುರಿತು ಜನಜಾಗೃತಿ ಮೂಡಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಹಾಗೂ ಸಮಾಜದ ಎಲ್ಲ ವರ್ಗದ ಜನರಿಗೆ ಪ್ರಕೃತಿ ಚಿಕಿತ್ಸಾ ಸೇವೆಗಳನ್ನು ತಲುಪಿಸುವುದು ಶಿಬಿರದ ಪ್ರಮುಖ ಉದ್ದೇಶವಾಗಿತ್ತು.

ಕಾರ್ಯಕ್ರಮದಲ್ಲಿ ಡಾ. ಪ್ರಗತಿ, ಡಾ. ಅನಂತ ವಿಜಯ್, ಡಾ. ರವೀಶ್, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ತ್ರಿಶಾ ಡಿ. ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಗಣ್ಯರನ್ನು ಸ್ವಾಗತಿಸುವುದರೊಂದಿಗೆ ಶಿಬಿರದ ಉದ್ದೇಶ ಮತ್ತು ಮಹತ್ವವನ್ನು ಪರಿಚಯಿಸಿದರು. ಕೊನೆಯಲ್ಲಿ ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!