Yuvavahini

NOV 19, 2026 8.00 PM IST

ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಭಕ್ತಿಭಾವದ ಗುರು ಸತ್ಸಂಗ ಕಾರ್ಯಕ್ರಮ

ಗುರುತತ್ವದ ಅರಿವು ಮೂಡಿಸಿದ ಗುರು ಸತ್ಸಂಗ

ಉಡುಪಿ ನ 19 : ಗುರುತತ್ವದ ಆರಾಧನೆ ಕೇವಲ ಧಾರ್ಮಿಕ ಆಚರಣೆಯಾಗಿರದೆ, ಬದುಕಿನಲ್ಲಿ ಸತ್ಯ, ಧರ್ಮ, ಪ್ರೀತಿ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಪ್ರೇರಣೆಯಾಗಿದೆ ಎಂಬ ಆಶಯದೊಂದಿಗೆ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ನವೆಂಬರ್ 19ರಂದು ಘಟಕದ ಮಾಜಿ ಅಧ್ಯಕ್ಷರಾದ ಅಮಿತಾಂಜಲಿ ಕಿರಣ್ ಅವರ ಮನೆಯಲ್ಲಿ ಗುರು ಸತ್ಸಂಗ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಘಟಕದ ಸದಸ್ಯರಾದ ವಾಸಂತಿ ಅಂಬಲಪಾಡಿ ಅವರು ಗುರು ಸಂದೇಶವನ್ನು ಅರ್ಥಪೂರ್ಣವಾಗಿ ಪ್ರಸ್ತುತಪಡಿಸಿ, ನಾರಾಯಣ ಗುರುಗಳ ತತ್ವಾದರ್ಶಗಳು ಹಾಗೂ ಗುರುತತ್ವದ ಮಹತ್ವವನ್ನು ತಿಳಿಸಿಕೊಟ್ಟರು.

ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣ ಅವರು ಗುರುಪೂಜೆಯನ್ನು ನೆರವೇರಿಸಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ಗುರುಗಳ ಪ್ರಸಾದವನ್ನು ವಿತರಿಸಿದರು. ಗುರು ಸಂದೇಶ ನೀಡಿದ ವಾಸಂತಿ ಅಂಬಲಪಾಡಿ ಹಾಗೂ ಕಾರ್ಯಕ್ರಮಕ್ಕೆ ಆತಿಥ್ಯ ವಹಿಸಿದ ಮನೆಯವರನ್ನು ಗಿಡ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕಿ ಶಾರದಾ ಉಮೇಶ್, ಪ್ರಚಾರ ನಿರ್ದೇಶಕಿ ಶಕುಂತಲಾ ಸುಕೇಶ್, ಸಮಾಜಸೇವಾ ನಿರ್ದೇಶಕ ಸುಜಿತ್ ಮಟ್ಟು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಘಟಕದ ಕಾರ್ಯದರ್ಶಿ ವೀಕ್ಷಿತ್ ಆತ್ಮೀಯವಾಗಿ ಸ್ವಾಗತಿಸಿದರು. ಘಟಕದ ಅಧ್ಯಕ್ಷ ವಿನೋದ್ ಮಂಚಿ ವಂದಿಸಿದರು. ಸಾಮೂಹಿಕ ಛಾಯಾಚಿತ್ರ ಹಾಗೂ ಉಪಹಾರ ಸೇವನೆಯೊಂದಿಗೆ ಗುರು ಸತ್ಸಂಗ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!