Yuvavahini

NOV 22, 2026 2.00 PM IST

ಯುವವಾಹಿನಿ ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ಕಾರ್ಯಕ್ರಮ

ಪ್ರತಿಭೆಗೆ ಪ್ರೋತ್ಸಾಹ, ಶಿಕ್ಷಣಕ್ಕೆ ನೆರವು – ವಿದ್ಯಾರ್ಥಿಗಳ ಭವಿಷ್ಯಕ್ಕೆ ಯುವವಾಹಿನಿಯ ವಿದ್ಯಾನಿಧಿ

ಉಡುಪಿ, ನ. 22 : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ, ಪ್ರತಿಭೆಗೆ ಗೌರವ ಹಾಗೂ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಕಾರ್ಯಕ್ರಮವು ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಿದ್ಯಾನಿಧಿ ಸಂಚಾಲಕರಾದ ನಿಕಟಪೂರ್ವ ಅಧ್ಯಕ್ಷ ದಯಾನಂದ ಕರ್ಕೇರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾನಿಧಿ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಮಾರ್ಗದರ್ಶಕರಾಗಿ ಆಗಮಿಸಿದ ಉಡುಪಿಯ ವಕೀಲರು ಹಾಗೂ ಕಾನೂನು ಅಭಿರಕ್ಷಕರಾದ ರಜನಿ ಅವರು ಮಕ್ಕಳ ಹಕ್ಕುಗಳು, ಅಗತ್ಯ ಕಾನೂನು ಮಾಹಿತಿ ಹಾಗೂ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಅತಿಥಿಯಾಗಿ ಭಾಗವಹಿಸಿದ ಬ್ರಹ್ಮಾವರದ ಸುವರ್ಣ ಎಂಟರ್‌ಪ್ರೈಸಸ್ ಮಾಲೀಕ ಮಧುಸೂದನ್ ಹೇರೂರು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಮುಂದಿನ ದಿನಗಳಲ್ಲಿಯೂ ಘಟಕಕ್ಕೆ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದ ಅವರು, ಅಗತ್ಯವಿರುವವರಿಗೆ ಉಚಿತವಾಗಿ ಆಕ್ಸಿಜನ್ ಮಿಷನ್ ವ್ಯವಸ್ಥೆ ಒದಗಿಸುವುದಾಗಿ ಘೋಷಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಪರೀಕ್ಷೆಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಸಹಕಾರ ನೀಡಲು ಸಿದ್ಧರಿರುವುದಾಗಿ ತಿಳಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರವಿರಾಜ್ ಕುಮಾರ್ ಅವರು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.

ಇದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಮತ್ತು ವನಿತಾ ರಮೇಶ್ ಅವರ ಪುತ್ರಿ ಹಂಶಿಕಾ ಆರ್. ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿರುವ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 18 ವಿದ್ಯಾರ್ಥಿಗಳಿಗೆ ಒಟ್ಟು ₹62,000 ವಿದ್ಯಾರ್ಥಿವೇತನ ವಿತರಿಸಲಾಯಿತು. ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಘಟಕದ ಸದಸ್ಯರ ಮಕ್ಕಳಾದ ಶೌರ್ಯ ಎಸ್. ಕಾಡಿಂತಾಯ ಅವರ ಪರವಾಗಿ ಅವರ ತಾಯಿ ಗೌರವ ಸ್ವೀಕರಿಸಿದರು. ಒಟ್ಟಾರೆಯಾಗಿ 20 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪುರಸ್ಕಾರ ಪಡೆದರು.

ಈ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು, ದಾನಿಗಳು, ವಿದ್ಯಾರ್ಥಿಗಳ ಪೋಷಕರು, ಕೇಂದ್ರ ಸಮಿತಿಯ ಸಿಂಚನ ಸಂಪಾದಕರಾದ ಹರೀಶ್ ಪಚ್ಚನಾಡಿ ಹಾಗೂ ಸುರೇಂದ್ರ ಕೋಟ್ಯಾನ್ ಅವರು ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ವಿನೋದ್ ಮಂಚಿ ಸ್ವಾಗತಿಸಿದರು. ನಿಶಾ ಮಹೇಶ್ ಕಾರ್ಯಕ್ರಮ ನಿರೂಪಿಸಿದರು. ಘಟಕದ ಕಾರ್ಯದರ್ಶಿ ವೀಕ್ಷಿತ್ ಕುಮಾರ್ ವಂದನಾರ್ಪಣೆ ಸಲ್ಲಿಸಿದರು. ಉಪಾಹಾರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡುವುದರ ಜೊತೆಗೆ ಸಾಮಾಜಿಕ ಜಾಗೃತಿ, ಸಾಧಕರಿಗೆ ಗೌರವ ಹಾಗೂ ಮುಂದಿನ ಪೀಳಿಗೆಯ ಭವಿಷ್ಯ ನಿರ್ಮಾಣಕ್ಕೆ ಪ್ರೇರಣೆ ನೀಡಿದ ವಿದ್ಯಾನಿಧಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂದಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!